ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು ಎಂದ ಎಚ್ ಡಿ ಕುಮಾರಸ್ವಾಮಿ.

Twitter
Facebook
LinkedIn
WhatsApp
ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು  ಎಂದ ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಕಾಸರಗೋಡಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ. ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ. ಅಲ್ಲಿನ ಜನರೊಂದಿಗೆ ಕರ್ನಾಟಕ ಮತ್ತು ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ, ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ ಮತ್ತು ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. ಈ ರೀತಿ ಬದಲಾವಣೆ ಮಾಡುತ್ತ ಹೋದರೆ ಎರಡು ರಾಜ್ಯಗಳ ನಡುವಿನ ಸಂಬಂಧಗಳು ಹಳಸಲು ಕಾರಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು