ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಅಂಜುಶ್ರೀ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಆತ್ಮಹತ್ಯೆ ಶಂಕೆ

Twitter
Facebook
LinkedIn
WhatsApp
ms 090123 anju

ಕಾಸರಗೋಡು, ಜ 09 : ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿ , ಪೆರುಂಬಳ ಬೇನೂರು ತಲಕ್ಲಾಯಿಯ ವಿದ್ಯಾರ್ಥಿನಿ ಅಂಜುಶ್ರೀ ಪಾರ್ವತಿಯ ಸಾವಿನ ಘಟನೆಯೂ ಇದೀಗ ಸಂಶಯಕ್ಕೆ ಎಡೆಮಾಡಿಕೊಟ್ಟಿದ್ದು , ಆತ್ಮಹತ್ಯೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದ್ದು , ಅಂಜುಶ್ರೀಯವಳದೆನ್ನಲಾದ ಪತ್ರ ಹಾಗೂ ಮೊಬೈಲ್ ಫೋನ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ . ಈ ಹಿಂದೆ ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಸಂಶಯ ಉಂಟಾಗಿದ್ದು , ಆದರೆ ಮರಣೋತ್ತರ ಪರೀಕ್ಷಾ ಪ್ರಾಥಮಿಕ ವರದಿಯಲ್ಲಿ ಸಾವಿಗೆ ವಿಷಾಹಾರ ಸೇವನೆ ಕಾರಣ ಅಲ್ಲ ಎಂಬ ಉಲ್ಲೇಖ ಮಾಡಿದ್ದು , ಇದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು . ಆದರೆ ವಿಷ ಸೇವನೆ ಮಾಡಿರುವುದು ಸಾವಿಗೆ ಕಾರಣ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಸುಳಿವು ನೀಡಿದ್ದರು. ಕರುಳಿನ ನಿಷ್ಕ್ರಿಯತೆ ಹಾಗೂ ಜಾಂಡಿಸ್ ನಿಂದ ಬಳಲುತ್ತಿದ್ದುದಾಗಿ ವರದಿಯಲ್ಲಿ ಉಲ್ಲೇಖಿಸಿದ್ದು , ಹೆಚ್ಚಿನ ಆಂತರಿಕ ಅವಯವಗಳನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ವರದಿ ಲಭಿಸಿದ ಬಳಿಕ ಸ್ಪಷ್ಟ ಮಾಹಿತಿ ಲಭಿಸಲಿದೆ. ಅಂಜುಶ್ರೀಯ ದೇಹದಲ್ಲಿ ವಿಷಾಂಶ ಪತ್ತೆಯಾಗಿದ್ದು ಆದರೆ ಆಹಾರದಲ್ಲಿದ್ದ ವಿಷದ ಅಂಶ ಅಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿದ್ದು , ಇದರಿಂದ ಸಂಶಯ ಉಂಟಾಗಿದ್ದು , ಈ ಪೊಲೀಸರು ತನಿಖೆ ಮುಂದುವರಿಸಿದ್ದಾರೆ .

ಡಿ . 31 ರಂದು ನಗರ ಹೊರವಲಯದ ಹೋಟೆಲೊಂದರಿಂದ ‘ಕುಝಿಮಂದಿ ‘ ಮಾಂಸಾಹಾರ ಆರ್ಡರ್ ಮೂಲಕ ಮನೆಗೆ ತರಿಸಿದ್ದ ಅಂಜುಶ್ರೀ ರಾತ್ರಿ ಸೇವಿಸಿದ ಬಳಿಕ ಅಸ್ವಸ್ಥ ಗೊಂಡಿದ್ದರು . ಬಳಿಕ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು .
ಐದು ದಿನಗಳ ಬಳಿಕ ಸ್ಥಿತಿ ಗಂಭೀರವಾದುದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಜನವರಿ 7 ರಂದು ಮೃತಪಟ್ಟಿದ್ದಳು. ಆಹಾರ ಖರೀದಿಸಿದ್ದ ಹೋಟೆಲ್ ನ ಪರವಾನಿಗೆಯನ್ನು ಆಹಾರ ಸುರಕ್ಷಾ ಇಲಾಖೆ ಅಧಿಕಾರಿಗಳು ರದ್ದುಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಮನೆಯಿಂದ ಲಭಿಸಿದ ಪತ್ರದಲ್ಲಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾಳೆನ್ನಲಾಗಿದೆ. ಆದರೆ ತನಿಖೆಯ ದೃಷ್ಟಿಯಿಂದ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ