ಕಾಸರಗೋಡು: ಭೀಕರ ಅಪಘಾತ- ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ
Twitter
Facebook
LinkedIn
WhatsApp
ಕಾಸರಗೋಡು, ಜ 23: ಲಾರಿಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಚಾಲಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.
ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ.
ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.