ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತ್ಯು.

Twitter
Facebook
LinkedIn
WhatsApp
ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತ್ಯು.

ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ನಗರ ಹೊರವಲಯದ ನುಳ್ಳಿಪ್ಪಾಡಿ ಚೆನ್ನಿಕೆರೆಯ ಸತ್ಯೇ೦ದ್ರ-ರಂಜಿನಿ ದಂಪತಿ ಪುತ್ರ ಅನ್ವೇದ್ ಮೃತಪಟ್ಟ ಮಗು.
ಶನಿವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಮನೆಯವರು ಆಸ್ಪತ್ರೆಗೆ ಕೊಂಡೊಯ್ಯಲಾಯಿತ್ತಾದರೂ ಆ ವೇಳೆ ಮಗು ಮೃತಪಟ್ಟಿತ್ತು.
ತಪಾಸಣೆಯಿಂದ ಮಗುವಿನ ಸಾವಿಗೆ ಕಾರಣ ತಿಳಿದುಬಂದಿರಲಿಲ್ಲ. ಹಾಗಾಗಿ, ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶ್ವಾಸನಾಳದಲ್ಲಿ ಸಣ್ಣ ಜೀರುಂಡೆ ಮರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಟವಾಡುತ್ತಿದ್ದ ಸಂದರ್ಭ ಮಗು ಜೀರುಂಡೆ ಮರಿಯನ್ನು ನುಂಗಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದುಎನ್ನಲಾಗಿದೆ.
ಆಟವಾಡುತ್ತಿದ್ದ ಮಗು ಒಮ್ಮೆಲೇ ಕುಸಿದು ಬಿದ್ದುದ್ದನ್ನು ಕಂಡ ಮನೆಯವರು ಗಾಬರಿಗೊಂಡ ಬೊಬ್ಬೆ ಹಾಕಿದಾಗ ಸ್ಥಳೀಯರು ಧಾವಿಸಿ ಬಂದು ಸ್ಥಳೀಯ ಆಸ್ಪತ್ರೆಗೆ ತಲಪಿಸಿದರು. ಆದರೆ, ಆಗಲೇ ಮಗು ಮೃತಪಟ್ಟಿತ್ತು. ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಸತ್ಯೇ೦ದ್ರ-ರಂಜಿನಿ ದಂಪತಿಗೆ ಎರಡೂವರೆ ವರ್ಷದ ಋದ್ವೇಗ್ ಎಂಬ ಮಗನಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು