ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಕೆಮಿಕಲ್ಸ್ ಪತ್ತೆ ; 78,678 ಬಾಕ್ಸ್ ಬಿಯರ್ ಸೀಝ್!

Twitter
Facebook
LinkedIn
WhatsApp
ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಕೆಮಿಕಲ್ಸ್ ಪತ್ತೆ ; 78,678 ಬಾಕ್ಸ್ ಬಿಯರ್ ಸೀಝ್!

ಮೈಸೂರು: ಕಿಂಗ್ ಫಿಷರ್  ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್‌ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್‌ನಲ್ಲಿ ದೃಢವಾಗಿದೆ. ವಿವಿಧ ಕೆಎಸ್‌ಬಿಸಿಎಲ್ ಹಾಗೂ ಆರ್‌ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು

ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್‌ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist