ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿ ದಾರುಣ ಮೃತ್ಯು - ಬಸ್ಸಿನಿಂದಿಳಿಯುವಾಗ ಅವಘಡ

Twitter
Facebook
LinkedIn
WhatsApp
ಕುಂದಾಪುರ: ಬಸ್ ಹರಿದು ವಿದ್ಯಾರ್ಥಿ ದಾರುಣ ಮೃತ್ಯು - ಬಸ್ಸಿನಿಂದಿಳಿಯುವಾಗ ಅವಘಡ

ಕುಂದಾಪುರ, ಜ 28 : ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

 ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

ಅಪಾಯಕಾರಿ ಸಂಚಾರ

ಕುಂದಾಪುರ ಭಾಗದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಒಂದೇ ಸಮಯದಲ್ಲಿ ಆರಂಭವಾಗುವ ಕಾರಣ ಬೆಳಗ್ಗಿನ‌ ಶಾಲಾ-ಕಾಲೇಜು ಆರಂಭಗೊಳ್ಳುವ ಸಮಯದಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ ಗಳು ತುಂಬಿ ವಿದ್ಯಾರ್ಥಿಗಳು ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಜೀವಭಯದಲ್ಲೇ ನಿಂತು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಹೆಮ್ಮಾಡಿ, ತಲ್ಲೂರು ಭಾಗದ ಮಕ್ಕಳಿಗೆ ಕುಂದಾಪುರಕ್ಕೆ ತೆರಳಲು ಬಸ್ಸಿನಲ್ಲಿ ಜಾಗವೇ ಇಲ್ಲದಿರುವುದರಿಂದ‌ ಜೀವಭಯದಲ್ಲೇ ನೇತಾಡಿಕೊಂಡು ತೆರಳುವ ಅನಿವಾರ್ಯತೆ ಉಂಟಾಗಿದ್ದು, ಬೆಳಗ್ಗಿನ ವೇಳೆ ಹೆಚ್ಚುವರಿ ಬಸ್ ಒದಗಿಸಬೇಕು ಎನ್ನುವ ಬೇಡಿಕೆ‌ ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ