ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನ್ನ‌ ಪ್ರಸಾದ ಸೇರಿದಂತೆ ಸೇವೆಗಳು ಆರಂಭ.

Twitter
Facebook
LinkedIn
WhatsApp
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನ್ನ‌ ಪ್ರಸಾದ ಸೇರಿದಂತೆ ಸೇವೆಗಳು ಆರಂಭ.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ (ಜುಲೈ.27) ಸೇವೆಗಳು ಆರಂಭಗೊಳ್ಳಲಿವೆ. ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಜು.29ರಿಂದ (ಗುರುವಾರ) ಪ್ರಾರಂಭಗೊಳ್ಳಲಿವೆ.
ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಭಕ್ತರಿಗೆ ಭೋಜನ ಪ್ರಸಾದ ವಿತರಣೆಯಾಗಲಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ, ಅಪರಾಹ್ನ 3.30ರಿಂದ ರಾತ್ರಿ 8.30ರ ತನಕ ಭಕ್ತರಿಗೆ ಶ್ರೀ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಮಂಗಳವಾರ ದೇವಳದಲ್ಲಿ ತುಲಾಭಾರ, ಶೇಷ ಸೇವೆ, ಪ್ರಾರ್ಥನೆ, ಮಧ್ಯಾಹ್ನದ ಮಹಾಪೂಜೆ, ಪವಮಾನಯುಕ್ತ ಪಂಚಾಮೃತಾಭಿಷೇಕ, ಕಲಶಪೂಜಾಯುಕ್ತ ಪಂಚಾಮೃತಾಭಿಷೇಕ, ಚವಲ ಹರಕೆ, ಹಣ್ಣುಕಾಯಿ ಸಮರ್ಪಣೆ, ವಾಹನ ಪೂಜೆ, ಹರಿವಾಣ ನೈವೇದ್ಯ, ಚಿತ್ರಾನ್ನ ಸಮರ್ಪಣೆ, ಹಾಲು ಪಾಯಸ, ಸಹಸ್ರನಾಮಾರ್ಚನೆ, ಅಷ್ಟೋತ್ತರ ಅರ್ಚನೆ, ಮೃಷ್ಠಾನ್ನ ಸಂತರ್ಪಣೆ, ಸಂತರ್ಪಣೆ , ನಂದಾದೀಪ, ಮಂಗಳಾರತಿ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಕ್ಷೀರಾಭಿಷೇಕ, ಕಾರ್ತಿಕ ಪೂಜೆ ಸೇವೆಗಳು ಆರಂಭಗೊಳ್ಳಲಿವೆ.

ಭಕ್ತರಿಗೆ ಭೋಜನ ಪ್ರಸಾದ ವಿತರಣೆ ಇರುತ್ತದೆ. ಅಲ್ಲದೆ ಭಕ್ತರಿಗೆ ಶ್ರೀ ದೇವಳದ ವಸತಿ ಗೃಹಗಳಲ್ಲಿ ತಂಗಲು ಅವಕಾಶ ನೀಡಲಾಗಿದೆ. ಲಡ್ಡು, ಪಂಚ ಕಜ್ಜಾಯ ಪ್ರಸಾದ, ತೀರ್ಥ ಬಾಟ್ಲಿ ವಿತರಣೆ ಆರಂಭಗೊಳ್ಳಲಿವೆ.

ಜುಲೈ 29ರ ಗುರುವಾರದಿಂದ ದೇವಳದ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಭಿಷೇಕ ಸೇವೆಗಳು ಆರಂಭಗೊಳ್ಳಲಿವೆ. ಸೇವಾರ್ಥಿಗಳು ಕನಿಷ್ಠ ಕೋವಿಡ್ ಪ್ರಥಮ ಡೋಸ್ ಲಸಿಕೆ ಪಡೆದಿರಬೇಕು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ ವರದಿ ಹಾಜರು ಪಡಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಪ್ರತಿ ಟಿಕೇಟಿಗೆ ಇಬ್ಬರು ಭಕ್ತರಿಗೆ ಮಾತ್ರ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ಸರ್ಪಸಂಸ್ಕಾರ ಕ್ರಿಯಾಕರ್ತರು ಕೂಡಾ ಕೋವಿಡ್ ಲಸಿಕೆ ಪಡೆದು ಕ್ರಿಯಾದಿಗಳನ್ನು ನೆರವೇರಿಸಲಿದ್ದಾರೆ.

ಇಷ್ಟರ ತನಕ ಒಂದು ಬ್ಯಾಚ್‌ನಲ್ಲಿ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯು ಗುರುವಾರದಿಂದ ಪ್ರತಿದಿನ ಎರಡು ಬ್ಯಾಚ್‌ನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಒಂದನೇ ಸರದಿ ಹಾಗೂ ಎರಡನೇ ಸರದಿಯು 10 ಗಂಟೆಗೆ ಆರಂಭಗೊಳ್ಳಲಿದೆ. ಪ್ರತೀ ಸರದಿಯಲ್ಲಿ 90ರಂತೆ ಎರಡು ಸರದಿಯಲ್ಲಿ ಒಟ್ಟು 180 ಸರ್ಪಸಂಸ್ಕಾರ ಸೇವೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಸರದಿಯಲ್ಲಿ ಆನ್‌ಲೈನ್ ಮೂಲಕ ಮುಂಗಡ ಬುಕ್ಕಿಂಗ್ ಮಾಡಿದ 60 ಮಂದಿಗೆ, ಡಿ.ಡಿ, ಎಂ.ಟಿ, ಎಂ.ಒ ಮಾಡಿದ 10 ಭಕ್ತರಿಗೆ ಹಾಗೂ ಗಣ್ಯ ವ್ಯಕ್ತಿಗಳಿಗೆ 39 ಸೇವೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಸುಮಾರು 6,409 ಮಂದಿ ಸರ್ಪಸಂಸ್ಕಾರ ಸೇವೆಯನ್ನು ಆನ್‌ಲೈನ್ ಮೂಲಕ ಮುಂಗಡವಾಗಿ ಕಾದಿರಿಸಿದ್ದಾರೆ. ಇವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಹಾಗಿದ್ದೂ ಸೇವಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಕಾರ್ಯನಿರ್ವಹಣಾಧಿಕಾರಿಗಳ ಅನುಮತಿ ಪಡೆದು ಆಯಾಯ ದಿನದಲ್ಲಿ ಆಗಮಿಸಿ ಸೇವೆ ನಿರ್ವಹಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗುವುದು.

ಪ್ರತಿ ದಿನ 4 ಸರದಿಯಲ್ಲಿ ಒಟ್ಟು 240 ಭಕ್ತರಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ 8 ಗಂಟೆ ತನಕ, 8.15ರಿಂದ 9.30ರ ತನಕ ಹಾಗೂ ಸಂಜೆ 5 ಗಂಟೆಯಿಂದ 6.30ರ ತನಕ ಸೇವೆ ನಡೆಯಲಿದೆ. ಪ್ರತಿ ಸರದಿಯಲ್ಲಿ 60 ಭಕ್ತರಂತೆ 4 ಸರದಿಯಲ್ಲಿ 240 ಭಕ್ತರು ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ.
ಪ್ರತಿ ದಿನ ಸರ್ಪಸಂಸ್ಕಾರ ಸೇವೆಗೆ ಸಂಬಂಧಪಟ್ಟ 180 ನಾಗಪ್ರತಿಷ್ಠೆಯೊಂದಿಗೆ ಪ್ರತ್ಯೇಕ 25 ಭಕ್ತರಿಗೆ ನಾಗಪ್ರತಿಷ್ಠೆ ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ. ಪ್ರತಿ ದಿನ ಮೂವರು ಮಹಾಭಿಷೇಕ ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು