ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಸಿಯುತ್ತಿರುವ ಕಾಂಗ್ರೆಸ್‌; ಅದರ ನೆಲೆಗಳನ್ನು ವಶಪಡಿಸಿಕೊಳ್ಳಲು ಟಿಎಂಸಿ, ಎನ್‌ಸಿಪಿ ಇತರ ವಿರೋಧ ಪಕ್ಷಗಳು ಯತ್ನ!

Twitter
Facebook
LinkedIn
WhatsApp
ಕುಸಿಯುತ್ತಿರುವ ಕಾಂಗ್ರೆಸ್‌; ಅದರ ನೆಲೆಗಳನ್ನು ವಶಪಡಿಸಿಕೊಳ್ಳಲು ಟಿಎಂಸಿ, ಎನ್‌ಸಿಪಿ ಇತರ ವಿರೋಧ ಪಕ್ಷಗಳು ಯತ್ನ!

ಒಂದೆಡೆ ವಿರೋಧ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ವಿರೋಧಿ ಮೈತ್ರಿಕೂಟವನ್ನು ರಚಿಸಲು ಕೆಲಸ ಮಾಡುತ್ತಿವೆ. ಇದೇ ಸಮಯದಲ್ಲಿ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ಸಿಗೆ ಪ್ರಬಲ ಸವಾಲುಗಳನ್ನು ಒಡ್ಡುತ್ತಿವೆ. ಇದು, ಕಾಂಗ್ರೆಸ್‌ ಪಕ್ಷವು ತನ್ನ ಪ್ರಾಬಲ್ಯವನ್ನು ಕಳೆದುಕೊಳ್ಳುತ್ತಿರುವ ರಾಜ್ಯಗಳಲ್ಲಿ ಹೆಚ್ಚು ದೃಢವಾಗುತ್ತಿದೆ.
ರಾಹುಲ್ ಗಾಂಧಿ ಅವರು ಬಿಜೆಪಿಗೆ ಪರ್ಯಾಯವಾಗಿ ರಾಷ್ಟ್ರೀಯ ಪಕ್ಷವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ. ಇದೇ ವೇಳೆ, ಟಿಎಂಸಿ ಮತ್ತು ಎನ್‌ಸಿಪಿಯಂತಹ ಪ್ರಾದೇಶಿಕ ಪಕ್ಷಗಳು ಇತರ ಪ್ರದೇಶಗಳಲ್ಲಿ ತಮ್ಮ ನೆಲೆಯನ್ನು ವಿಸ್ತರಿಕೊಳ್ಳಲು ಮತ್ತು ಮೈತ್ರಿ ಸಮಯದಲ್ಲಿ ಚೌಕಾಶಿ ಶಕ್ತಿಯನ್ನು ಹೆಚ್ಚಿಸಲು ನೋಡುತ್ತಿದ್ದಾರೆ.
ಕಾಂಗ್ರೆಸ್ಸಿನಲ್ಲಿ ಕೆಲವರು ಉನ್ನತ ನಾಯಕತ್ವವನ್ನು ದುರ್ಬಲಗೊಳಿಸುತ್ತಿರುವುದು ಮತ್ತು ನಿರ್ಧಾರಗಳಲ್ಲಿನ ನಿಧಾನಗತಿಯು ಪಕ್ಷದ ಕಾರ್ಯಕರ್ತರಲ್ಲಿ ಭರವಸೆಯನ್ನು ಕುಂದಿಸುತ್ತಿದೆ. ಇದು ಪ್ರಾದೇಶಿಕ ಪಕ್ಷಗಳು ತಮ್ಮಷ್ಟು ಆಶಾವಾದಿಗಳಾಗಲು ನೆರವಾಗುತ್ತದೆ ಎಂದು ಭಾವಿಸಲಾಗಿದೆ.
“ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇರಳ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿರುವ ಕಾಂಗ್ರೆಸ್ ತನ್ನ ನೆಲೆಯನ್ನು ಕಳೆದುಕೊಂಡಿದೆ. ಬಿಹಾರ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್  ವಿಫಲವಾಗಿದೆ ಆರ್‌ಜೆಡಿ ಎಂದು ಆರೋಪಿಸಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.


ಬಂಗಾಳದಲ್ಲಿ ಬಹುಪಾಲು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಒಂದೋ TMC ಅಥವಾ BJP ಗೆ ತೆರಳುತ್ತಿದ್ದಾರೆ. ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳು ಹಾಗೂ ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಇದೇ ರೀತಿಯಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಪಕ್ಷವು ತನ್ನ ನೆಲೆಯನ್ನು ಮರಳಿ ಪಡೆಯಲು ವಿಫಲವಾಗಿದೆ. ಇನ್ನು ಪಂಜಾಬ್, ಛತ್ತೀಸ್‌ಘಡ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಅಥವಾ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲು ಪ್ರಯತ್ನಸುತ್ತಿದೆ.
ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನೋಡುತ್ತಿರುವಾಗ, ಕಾಂಗ್ರೆಸ್‌ನ ಭವಿಷ್ಯವನ್ನು ಅಲ್ಲಗಳೆಯುವಂತಿದ್ದರೂ, ಇತರ ರಾಜ್ಯಗಳಲ್ಲಿ ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದನ್ನು ತಡೆಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
“ಟಿಎಂಸಿ ಬಂಗಾಳದಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿ ವಿರುದ್ಧ ಹೋರಾಡಿದೆ. ಕೇರಳದಲ್ಲಿ ಎಡ ಮತ್ತು ಕಾಂಗ್ರೆಸ್ ಪರಸ್ಪರ ವಿರುದ್ಧವಾಗಿತ್ತು. ಮಹಾರಾಷ್ಟ್ರದಲ್ಲಿ ಪ್ರಸ್ತುತ ಮೈತ್ರಿ ಪಾಲುದಾರರಾದ ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಿವೆ ಮತ್ತು ಗುಜರಾತ್‌ನಲ್ಲಿ ಏಕಾಂಗಿ ಸ್ಪರ್ಧೆಯಿದೆ. ಇಂತಹ ಉದಾಹರಣೆಗಳು ಇನ್ನೂ ಹಲವಾರು ರಾಜ್ಯಗಳಲ್ಲಿವೆ. ಹೀಗಿರುವಾಗ ಒಂದು ರಾಷ್ಟ್ರೀಯ ಮೈತ್ರಿಕೂಟವು ಎಲ್ಲಾ ಪಕ್ಷಗಳಿಂದ ಸಾಕಷ್ಟು ಕೊಡುಗೆಗಳನ್ನು ನಿರೀಕ್ಷಿಸುತ್ತದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು