ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಲ್ಲಿ ಹೆಚ್ಚಿದ ಝಿಕಾ ವೈರಸ್‌ -ಮಂಗಳೂರಿಗೆ ಆಗಮಿಸುವರ ಮೇಲೆ ಕಟ್ಟೆಚ್ಚರ.

Twitter
Facebook
LinkedIn
WhatsApp
15 ಕ್ಕೂ ಅಧಿಕ ಮಂದಿಯಲ್ಲಿ ಜಿಕಾ ವೈರಸ್‌ ಪತ್ತೆ .

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಜೊತೆಯಲ್ಲೇ ಕೇರಳದಲ್ಲಿ ಝಿಕಾ ವೈರಸ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೇರಳದಲ್ಲಿ ಪ್ರಕರಣದ ಸಂಖ್ಯೆ 18ಕ್ಕೆ ಏರಿಕೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ.

ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಎರಡನೇ ಅಲೆ ತಗ್ಗಿದ್ದರೂ ಕೂಡ ಮೂರಲೇ ಅಲೆ ಕೇರಳದಲ್ಲಿ ದಿನೇ ದಿನೇ ಆತಂಕವನ್ನು ಸೃಷ್ಟಿಸುತ್ತಿದೆ. ಈ ನಡುವಲ್ಲೇ ಕೇರಳದಲ್ಲಿ ಝಿಕಾ ವೈರಸ್‌ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಗರ್ಭಿಣಿಗೆ ಕಾರಣಿಸಿಕೊಂಡಿದ್ದ ಝಿಕಾ ವೈರಸ್‌ ಇದೀಗ 18 ಮಂದಿಗೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೇರಳದಲ್ಲಿ ಕೊರೊನಾ ಜೊತೆ ಝಿಕಾ ವೈರಸ್‌ ಪ್ರಕರಣ ಹೆಚ್ಚಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೇರಳದಿಂದ ರಾಜ್ಯಕ್ಕೆ ಮರಳುವವರ ಮೇಲೆ ತೀವ್ರ ನಿಗಾ ಇಡಲು ಮುಂದಾಗಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವ ಕಡೆಗಳಲ್ಲಿ 10 ಚೆಕ್‌ ಪೋಸ್ಟ್‌ ಗಳನ್ನು ತೆರೆದಿದ್ದು, ಪ್ರಮುಖ 3 ಚೆಕ್‌ ಪೋಸ್ಟ್‌ ಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಅಲ್ಲದೇ ಕೇರಳ ಸಂಪರ್ಕಿಸುವ ಒಳ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್‌ ಮಾಡಿದೆ.

ಅದ್ರಲ್ಲೂ ಕೇರಳ ಮಂಗಳೂರು ನಗರದ ಜೊತೆಗೆ ನೇರ ಸಂಪರ್ಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿ 6 ಕಡೆಗಳಲ್ಲಿ ಚೆಕ್‌ ಪೋಸ್ಟ್‌ ತೆರೆಯಲಾಗಿದೆ. ಕೇರಳದಿಂದ ಬರುವವರು ಕನಿಷ್ಠ 72 ಗಂಟೆಗಳ ಮೊದಲು ಮಾಡಿಸಿದ RTPCR ರಿಪೋರ್ಟ್‌ ತರಬೇಕು. ಇಲ್ಲವಾದ್ರೆ ಒಂದು ಡೋಸ್‌ ವ್ಯಾಕ್ಸಿನ್‌ ಪಡೆದಿರಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು