ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ (HD Revanna) ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ರೇವಣ್ಣ ಸೂಚನೆ ಮೇರೆಗೆ ಅಪಹರಣವಾಗಿದೆ ಎಂಬುದಕ್ಕೆ ಸಾಕ್ಷ್ಯಾಧಾರ ಹಾಜರುಪಡಿಸಿಲ್ಲ. ರಿಮಾಂಡ್ ಅರ್ಜಿ ಸಲ್ಲಿಕೆ ವೇಳೆ ಹೇಳಿಕೆ ದಾಖಲಿಸಿದ ಪ್ರಸ್ತಾಪವಿಲ್ಲ. ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಿದ ಪ್ರಸ್ತಾಪವಿಲ್ಲ ಎಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನೀಡಿರುವ ತೀರ್ಪಿನಲ್ಲಿ ಉಲ್ಲೇಖವಾಗಿದೆ. ಇನ್ನು ಜಾಮೀನು ಸಿಕ್ಕರೂ ಸಹ ರೇವಣ್ಣ ಇಂದು ರಾತ್ರಿ ಜೈಲಿನಲ್ಲೇ ಕಳೆಯಬೇಕಾಗಿದೆ. ಈಗಾಗಲೇ ಸಮಯ ಆಗಿದ್ದರಿಂದ ಕೋರ್ಟ್ ಪ್ರಕ್ರಿಯೆಗಳು ನಾಳೆಗೆ ಮುಗಿಯಲಿವೆ. ಹೀಗಾಗಿ ರೇವಣ್ಣ ನಾಳೆ(ಮೇ 14) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಕೋರ್ಟ್ನ ಷರತ್ತುಗಳೇನು?
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ
ಸಾಕ್ಷ್ಯಾಧಾರ ನಾಶಪಡಿಸಬಾರದು
ಎಸ್‌ಐಟಿ ತನಿಖೆಗೆ ಸಹಕರಿಸಬೇಕು
ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ
ಎಸ್ಐಟಿ ಬಂಧನದ ಬಳಿಕ ಹೆಚ್.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇನ್ನು ಎಸ್ಐಟಿ ಪರ ಎಸ್ಎಸ್ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು. ಜಾಮೀನು ಸಿಕ್ಕರೂ ಇಂದು ಬಿಡುಗಡೆ ಭಾಗ್ಯವಿಲ್ಲ. ಯಾಕಂದ್ರೆ ಕೋರ್ಟ್ ಸೂಚಿಸಿರುವ ಐದು ಲಕ್ಷ ಬಾಂಡ್ ಜೊತೆ ಇಬ್ಬರ ಶೂರಿಟಿ ನೀಡಬೇಕು. ಅಲ್ಲದೇ ಕೋರ್ಟ್ ಜಾಮೀನು ಆದೇಶ ಪ್ರತಿಯನ್ನು ತೆಗೆದುಕೊಂಡು ಜೈಲಾಧಿಕಾರಿಗಳಿಗೆ ನೀಡಬೇಕು. ಹೀಗಾಗಿ ಇವೆಲ್ಲ ನೀಡಬೇಕಾದರೆ ಈಗಾಗಲೇ ಸಮಯ ಆಗಿದೆ. ಆಗಿದ್ದರಿಂದ ರೇವಣ್ಣ ನಾಳೆ(ಮೇ 14) ಸಂಜೆ ವೇಳೆಗೆ ಬಿಡುಗಡೆಯಾಗಲಿದ್ದಾರೆ.
ಏನಿದು ಕಿಡ್ನಾಪ್ ಕೇಸ್?
ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.
ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್ಐಟಿ ಮೂರನೇ ನೋಟಿಸ್ ನೀಡಿತ್ತು.
ಎಸ್ಐಟಿ ನೋಟಿಸ್ ನೀಡುತ್ತಿದ್ದಂತೆ ಮಾಜಿ ಹೆಚ್ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಬಳಿಕ ಎಸ್ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತು.