ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

Twitter
Facebook
LinkedIn
WhatsApp
MDK MURDER18012023 1

ಕೊಪ್ಪಳ: ಜೂಜಾಟ ಹಾಗೂ ಗ್ಯಾಂಬ್ಲಿಂಗ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಮಣ ನಿಮಿತ್ತ ಕೋಳಿ ಕಾಳಗ ನಡೆದಿತ್ತು. ಮಂಗಳವಾರ ಸಂಜೆ ಜೂಜು ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಯಾವೊಬ್ಬ ಗ್ಯಾಂಬ್ಲರ್ ಅನ್ನು ಬಂಧಿಸಲ್ಲ. ಬದಲಾಗಿ ಹುಂಜಗಳು (Rooster) ಸಿಕ್ಕಿದ್ದು, ಜೊತೆಗೆ ಬೈಕ್‍ಗಳನ್ನು (Bike) ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆ ಸಿಕ್ಕಿರುವ ಹುಂಜಗಳನ್ನು ಕರೆತಂದಿರುವ ಪೊಲೀಸರು ಸೆಲ್‌ನಲ್ಲಿ ಇಟ್ಟಿದ್ದಾರೆ. ದಾಳಿ ವೇಳೆ ಜೂಜುಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಸಬೂಬು ಹೇಳಿದ್ದಾರೆ. ಪೊಲೀಸರ (Police) ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 

MDK MURDER18012023 2

ಸಂಕ್ರಾಂತಿ, ಯುಗಾದಿ, ದೀಪಾವಳಿ ಹಬ್ಬದ ನೆಪದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಡೆ ನಿಷೇಧಿತ ಕೋಳಿ ಕಾಳಗ ನಡೆಸಲಾಗುತ್ತದೆ. ಕೋಳಿ ಕಾಳಗಕ್ಕೆ ಕೋಟ್ಯಂತರ ರೂಪಾಯಿ ಜೂಜು ವಹಿವಾಟು ನಡೆಯುತ್ತದೆ. ರಾಜಕೀಯ ಮುಖಂಡರೇ ಕೋಳಿ ಕಾಳಗ ಆಯೋಜನೆ ಮಾಡುತ್ತಾರೆ. ಈ ಕಾರಣಕ್ಕೆ ಪೊಲೀಸರು ಅವರನ್ನು ಅಲ್ಲೇ ಬಿಟ್ಟು, ಕೋಳಿ, ಬೈಕ್‍ಗಳನ್ನು ಮಾತ್ರ ಜಪ್ತಿ ಮಾಡಿ ಪ್ರಕರಣ ದಾಖಲಿಸುವ ನಾಟಕ ಆಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ