ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊರೊನಾ ವೈರಸ್‌ನ ಮೂಲ “ರಕೂನ್‌ ಡಾಗ್‌’? ಹೊಸ ವಾದ ಮುಂದಿಟ್ಟ ಅಂತಾರಾಷ್ಟ್ರೀಯ ತಜ್ಞರ ತಂಡ

Twitter
Facebook
LinkedIn
WhatsApp
Untitled

ನ್ಯೂಯಾರ್ಕ್‌: ಕೊರೊನಾ ವೈರಸ್‌ನ ಮೂಲ ಚೀನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ವುಹಾನ್‌ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಇಲ್ಲಿ ಮಾರಾಟ ಮಾಡುತ್ತಿದ್ದ ರಕೂನ್‌ ಪ್ರಾಣಿಯ ಮಾಂಸದಲ್ಲಿ ಸಾರ್ಸ್‌-ಕೊವ್‌-2 ವೈರಸ್‌ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವು ತಿಳಿಸಿದೆ.

ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ 2020ರ ಜನವರಿಯಲ್ಲಿ ಚೀನ ಸರ್ಕಾರ ವುಹಾನ್‌ ಮಾರುಕಟ್ಟೆ ಬಂದ್‌ ಮಾಡಿದ ಕೂಡಲೇ ಸಂಶೋಧಕರು ಅಲ್ಲಿದ್ದ ಗೋಡೆಗಳು, ನೆಲ, ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಲೋಹದ ಪಂಜರಗಳು, ಬಂಡಿಗಳು, ಉಳಿದ ಮಾಂಸದಿಂದ ಮಾದರಿಗಳನ್ನು ಸಂಗ್ರಹಿಸಿದ್ದರು. ಇದನ್ನು ಅನುವಂಶಿಕ ಪರೀಕ್ಷೆಗೆ ಒಳಪಡಿಸಿ, ಇದರ ಆಧಾರದಲ್ಲಿ ಗುರುವಾರ ವರದಿಯನ್ನು ತಜ್ಞರು ಬಿಡುಗಡೆಗೊಳಿಸಿದ್ದಾರೆ.

ಮಾದರಿಯ ಜೈವಿಕ ಅಂಶವನ್ನು ಪರೀಕ್ಷಿಸಿದಾಗ ಇದು ರಕೂನ್‌ ಪ್ರಾಣಿಗೆ ಸೇರಿರುವುದು ಹಾಗೂ ಇದರಲ್ಲಿ ಕೊರೊನಾ ವೈರಸ್‌ ಇರುವುದು ಬಹಿರಂಗವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ತಜ್ಞರ ತಂಡದಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾ, ಅಸ್ಟ್ರೇಲಿಯಾದ ಸಿಡ್ನಿ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ತಜ್ಞರು ಇದ್ದಾರೆ.

ಕಳೆದ ವಾರವಷ್ಟೇ ವುಹಾನ್‌ ವೈರಾಲಜಿ ಪ್ರಯೋಗಾಲಯದಿಂದ ಆಕಸ್ಮಿಕವಾಗಿ ವೈರಸ್‌ ಸೋರಿಕೆಯಾದ ಪರಿಣಾಮ ಜಗತ್ತಿನಾದ್ಯಂತ ಕೊರೊನಾ ಮಾರಿಗೆ ಕಾರಣವಾಯಿತು ಎಂದು ಅಮೆರಿಕ ಪ್ರತಿಪಾದಿಸಿತ್ತು.ಈ ನಡುವೆ, ಇಸ್ರೇಲ್‌ನಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿಯೊಂದು ಪತ್ತೆಯಾಗಿದೆ. ವಿದೇಶದಿಂದ ಆಗಮಿಸಿದ್ದ ಇಬ್ಬರು ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ