ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊರೋನಾ ಭೀತಿ ಯಿ೦ದ ದ.ಕ ಜಿಲ್ಲೆಯಲ್ಲಿ ಪರೀಕ್ಷೆಗಳು ತಾತ್ಕಾಲಿಕ ರದ್ದು.

Twitter
Facebook
LinkedIn
WhatsApp
ಕೊರೋನಾ ಭೀತಿ ಯಿ೦ದ ದ.ಕ ಜಿಲ್ಲೆಯಲ್ಲಿ ಪರೀಕ್ಷೆಗಳು ತಾತ್ಕಾಲಿಕ ರದ್ದು.

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಎಲ್ಲ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ನೀಡುವಂತೆ ತಿಳಿಸಿದ್ದಾರೆ.

ಕೇರಳದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಯಾವುದೇ ವಿನಾಯಿತಿಯನ್ನು ನೀಡಲು ಅವಕಾಶ ಇಲ್ಲದೇ ಇರುವುದರಿಂದ ಈ ಕ್ರಮ ಅನಿವಾರ್ಯ ಎಂದಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ ಜಿಲ್ಲೆಯಾದ ಕೇರಳದ ಕಾಸರಗೋಡು ಜಿಲ್ಲೆಯಿಂದ ಬರುತ್ತಿದ್ದಾರೆ. ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ಸೋಂಕು ಹರಡುವ ಸಾಧ್ಯತೆಗಳಿದ್ದು, ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ವಿಶೇಷ ತಪಾಸಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮದ್ಯದಂಗಡಿ ಬಂದ್‌:
ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲ್ಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಆ.3ರಿಂದ 15ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ಈ ಸಮಯದಲ್ಲಿ ಆ ವ್ಯಾಪ್ತಿಯ ವೈನ್‌ಶಾಪ್ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು