ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋಟಾ, ಸುನಿಲ್ ಕುಮಾರಿಗೆ ಮಂತ್ರಿಸ್ಥಾನ. ಬಿಜೆಪಿ ಯಾರ್ಕರ್ ಎಸೆತಕ್ಕೆ ಕರಾವಳಿ ಕಾಂಗ್ರೆಸ್ ತತ್ತರ?

Twitter
Facebook
LinkedIn
WhatsApp
ಕೋಟಾ, ಸುನಿಲ್ ಕುಮಾರಿಗೆ ಮಂತ್ರಿಸ್ಥಾನ. ಬಿಜೆಪಿ ಯಾರ್ಕರ್ ಎಸೆತಕ್ಕೆ ಕರಾವಳಿ ಕಾಂಗ್ರೆಸ್ ತತ್ತರ?

ಕರಾವಳಿಯ ಪ್ರಬಲ ಜನಾಂಗದ ಇಬ್ಬರು ನಾಯಕರುಗಳಿಗೆ ಬಿಜೆಪಿ ಈ ಬಾರಿಯ ಕ್ಯಾಬಿನೆಟ್ನಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ಬಹುದೊಡ್ಡ ಯಾರ್ಕರ್ ಎಸೆತವನ್ನು ಕಾಂಗ್ರೆಸ್ಸಿಗೆ ನೀಡಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ವ್ಯಕ್ತವಾಗುತ್ತಿದೆ.

ಬಿಜೆಪಿ ಎಸೆದ ಈ ಸ್ವಿಂಗ್ ಯಾರ್ಕರ್ ಗೆ ಕಾಂಗ್ರೆಸ್ ತತ್ತರಿಸಿ ಹೋಗಬಹುದು ಎಂದು ರಾಜಕೀಯ ವಲಯದಲ್ಲಿ ಮಾತುಗಳು ವ್ಯಕ್ತವಾಗುತ್ತಿವೆ. ಬಿಜೆಪಿಯ ಈ ತಂತ್ರಗಾರಿಕೆ ಕಾಂಗ್ರೆಸನ್ನು ಮಣಿಸುವ ಕೆಲಸದಲ್ಲಿ ಬಹಳಷ್ಟು ಪ್ರಯೋಜನಕಾರಿಯಾಗಲಿದೆ ಎಂಬ ಅಭಿಪ್ರಾಯ ವಿಶ್ಲೇಷಣೆಕಾರರಿಂದ ವ್ಯಕ್ತವಾಗುತ್ತಿದೆ.

ಇನ್ನೊಂದು ಪ್ರಬಲ ಜನಾಂಗ ಬಂಟ ಜನಾಂಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಕರಾವಳಿಯಲ್ಲಿ ತನ್ನ ಅಸ್ತಿತ್ವವನ್ನು ಈ ಮೊದಲು ಗಟ್ಟಿ ಮಾಡಿದೆ.

ಈಗ ಪ್ರಥಮಬಾರಿ ಎಂಬಂತೆ ಬಿಲ್ಲವ ಜನಾಂಗದ ಇಬ್ಬರು ನಾಯಕರುಗಳಿಗೆ ಮಣೆ ಹಾಕುವ ಮೂಲಕ ಜನಾಂಗವನ್ನು ಕಾಂಗ್ರೆಸ್ಸಿನಿಂದ ಸಂಪೂರ್ಣ ವಿಮುಖ ಮಾಡಿಸುವ ತಂತ್ರಗಾರಿಕೆ ಅಡಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಬಿಎಸ್ ವೈ ರಾಜಿನಾಮೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಕಾಂಗ್ರೆಸ್ ಕನಸು ಕಠಿಣವಾಗಲಿದೆಯೆ?

ಕರಾವಳಿಯ ಕಾಂಗ್ರೆಸ್ನಲ್ಲಿ ಸರಿಯಾದ ಜನಾಂಗವನ್ನು ಹಿಡಿದಿಟ್ಟುಕೊಳ್ಳುವ ಯುವ ನಾಯಕರುಗಳ ಕೊರತೆ ಬಹುವಾಗಿ ಕಾಂಗ್ರೆಸನ್ನು ಕಾಡುತ್ತಿದೆ. ಇರುವ ನಾಯಕರುಗಳು ಜನಾಂಗದ ಒಳಗೆ ಯಾವುದೇ ಪ್ರಭಾವವನ್ನು ಹೊಂದಿರದೆ ಇರುವುದು ಕಾಂಗ್ರೆಸ್ನ ತಲೆನೋವನ್ನು ಇನ್ನಷ್ಟು ಹೆಚ್ಚಿಗೆ ಮಾಡಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕಾಲದಲ್ಲಿ ಬಿಲ್ಲವ ಜನಾಂಗ ಕಾಂಗ್ರೆಸನ್ನು ಬೆಂಬಲಿಸಿದ ಕಾರಣ ಸತತವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿತ್ತು ಎಂಬುದನ್ನು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಅರ್ಧಕ್ಕಿಂತ ಹೆಚ್ಚು ಭಾಗ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಬಿಲ್ಲವ ಜನಾಂಗ ಈಗ ಸಂಪೂರ್ಣವಾಗಿ ಕಾಂಗ್ರೆಸ್ನಿಂದ ವಿಮುಖವಾಗುವ ಲಕ್ಷಣಗಳು ಗೋಚರಿಸುತ್ತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದು ಭಾಗದಲ್ಲಿ ಪ್ರಬಲ ಬಂಟ ಜನಾಂಗ ಕೆ ಶಾಸಕ ಮತ್ತು ಸಂಸದರ ಪ್ರಾತಿನಿಧ್ಯವನ್ನು ಬಿಜೆಪಿ ನೀಡಿರುವ ಕಾರಣ ಈ ಜನಾಂಗವು ಬಿಜೆಪಿಯೊಂದಿಗೆ ಸಂಪೂರ್ಣವಾಗಿ ಗುರುತಿಸಿಕೊಂಡಿರುವುದು ಸಹಜವೇ ಆಗಿದೆ.

ದಲಿತ ನಾಯಕರೊಬ್ಬರಿಗೆ ಮಂತ್ರಿ ಸ್ಥಾನ ನೀಡಿರುವುದು ಕರಾವಳಿಯ ದಲಿತರನ್ನು ಬಿಜೆಪಿ ತನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸಫಲವಾಗಿದೆ ಎನ್ನುತ್ತಾರೆ ವಿಶ್ಲೇಷಕರು.

ಇತರ ಜಾತಿಗಳಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ಕೊಡುವ ಆಲೋಚನೆ ಬಿಜೆಪಿಯಲ್ಲಿದೆ ಎನ್ನುತ್ತಾರೆ ವಿಶ್ಲೇಷಕರು. ಯಾವುದೇ ತಂತ್ರಗಾರಿಕೆ ಇಲ್ಲದೆ ತನ್ನ ಬೆಂಬಲಿಗರಿಗೆ ಪಕ್ಷದ ಸ್ಥಾನಮಾನವನ್ನು ನೀಡುವ ಕಾಂಗ್ರೆಸ್ ಒಂದು ಹಂತದಲ್ಲಿ ಬಿಜೆಪಿಯ ತಂತ್ರಗಾರಿಕೆಯ ಮುಂದೆ ತತ್ತರಿಸಿ ಹೋಗಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಪ್ರಜ್ಞಾವಂತ ಜಿಲ್ಲೆಯ ಮತದಾರ ಯಾವ ರೀತಿಯಲ್ಲಿ ಯೋಚಿಸುತ್ತಾನೆ ಎಂಬುದು ನಿಗೂಢ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು