ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಮವಾದಿ, ನಕಲಿ ಸುದ್ದಿಗಳಿಂದ ಅಂತಿಮವಾಗಿ ದೇಶಕ್ಕೆ ಕೆಟ್ಟ ಹೆಸರು - ಸುಪ್ರಿಂ ಕಳವಳ

Twitter
Facebook
LinkedIn
WhatsApp
ಕೋಮವಾದಿ, ನಕಲಿ ಸುದ್ದಿಗಳಿಂದ ಅಂತಿಮವಾಗಿ ದೇಶಕ್ಕೆ ಕೆಟ್ಟ ಹೆಸರು – ಸುಪ್ರಿಂ ಕಳವಳ

ನವದೆಹಲಿ: ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಕೆಲವು ಚಾನೆಲ್‌ಗಳಲ್ಲಿ ತೋರಿಸಲಾದ ಸುದ್ದಿಗಳು ಕೋಮುವಾದದ ಧ್ವನಿಯನ್ನು ಹೊಂದಿವೆ, ಇದು ದೇಶಕ್ಕೆ ಕೆಟ್ಟ ಹೆಸರು ತರಬಹುದು ಎಂದು ಕೋರ್ಟ್ ಎಚ್ಚರಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಜಾಮೀಯತ್ ಉಲೇಮಾ-ಇ-ಹಿಂದ್ ಹಾಗೂ ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದಾಗ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಅರ್ಜಿಯಲ್ಲಿ ಮರ್ಕಜ್ ನಿಜಾಮುದ್ದೀನ್ ನ ಧಾರ್ಮಿಕ ಸಮ್ಮೇಳನದ ನಕಲಿ ಸುದ್ದಿಗಳ ಪ್ರಸಾರವನ್ನು ನಿಲ್ಲಿಸಲು ಮತ್ತು ಕಟ್ಟುನಿಟ್ಟಾಗಿ  ಕ್ರಮ  ತೆಗೆದುಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿತ್ತು.

“ಖಾಸಗಿ ಸುದ್ದಿ ವಾಹಿನಿಗಳ ವಿಭಾಗದಲ್ಲಿ ತೋರಿಸಿರುವ ಪ್ರತಿಯೊಂದೂ ಕೋಮುವಾದಿ ದ್ವನಿಯನ್ನು ಹೊಂದಿದೆ. ಅಂತಿಮವಾಗಿ, ಈ ದೇಶಕ್ಕೆ ಕೆಟ್ಟ ಹೆಸರು ಪಡೆಯುವಂತಾಗುತ್ತದೆ. ಈ ಖಾಸಗಿ ಚಾನೆಲ್‌ಗಳನ್ನು ನಿಯಂತ್ರಿಸಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ” ಎಂದು ಪೀಠ ಪ್ರಶ್ನಿಸಿದೆ.
“ಸಾಮಾಜಿಕ ಜಾಲತಾಣ ಪ್ರಬಲ ಧ್ವನಿಗಳನ್ನು ಮಾತ್ರ ಆಲಿಸುತ್ತವೆ. ನ್ಯಾಯಾಧೀಶರ ವಿರುದ್ಧ, ಸಂಸ್ಥೆಯ ವಿರುದ್ಧ ಯಾವುದೇ ಹೊಣೆಗಾರಿಕೆ ಇಲ್ಲದೇ ಹಲವಾರು ವಿಷಯಗಳನ್ನು ಬರೆಯಲಾಗುತ್ತದೆ” ಎಂದು ನ್ಯಾ. ಸೂರ್ಯಕಾಂತ್ ಹಾಗೂ ಎಎಸ್ ಬೋಪಣ್ಣ ಅವರಿದ್ದ ಪೀಠ ಹೇಳಿದೆ.
“ವೆಬ್ ಪೋರ್ಟಲ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ನಕಲಿ ಸುದ್ದಿ ಮತ್ತು ಅಪಪ್ರಚಾರದ ಮೇಲೆ ಯಾವುದೇ ನಿಯಂತ್ರಣವಿಲ್ಲ. ನೀವು ಯೂಟ್ಯೂಬ್‌ಗೆ ಹೋದರೆ, ನಕಲಿ ಸುದ್ದಿಗಳು ಹೇಗೆ ಮುಕ್ತವಾಗಿ ಪ್ರಸಾರವಾಗುತ್ತವೆ ಎಂಬುದನ್ನು ಕಂಡುಕೊಳ್ಳಬಹುದು ಮತ್ತು ಯಾರು ಬೇಕಾದರೂ ಯೂಟ್ಯೂಬ್‌ನಲ್ಲಿ ಚಾನೆಲ್ ಆರಂಭಿಸಬಹುದು” ಎಂದು ಪೀಠ ಅಸಮಧಾನ ವ್ಯಕ್ತಪಡಿಸಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು