- ರಾಜ್ಯ
- 4:19 ಅಪರಾಹ್ನ
- ಜನವರಿ 17, 2023
25ನೇ ವಯಸ್ಸಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಕೋಲಾರ ಯುವತಿ ಆಯ್ಕೆ

ಕೋಲಾರ: ಬಡತನದಲ್ಲೇ ಬೆಳೆದ ಕೋಲಾರದ ಯುವತಿ, ಸತತ ಪರಿಶ್ರಮದಿಂದ ರಾಜ್ಯವೇ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ.
ಹೌದು.. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎನ್.ಗಾಯಿತ್ರಿ (25) ಕರ್ನಾಟಕ ಹೈಕೋರ್ಟಿನ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದ ಗಾಯತ್ರಿ ಅವರು ಸತತ ಪರಿಶ್ರಮದಿಂದ ಕೊನೆಗೂ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.

ತಳ ಸಮುದಾಯದಿಂದ ಬಂದ ಗಾಯತ್ರಿ ಅವರು ಬಡತನದಲ್ಲೇ ಬೆಳೆದರು. ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಆರಂಭಿಸಿ, ಬಾಲಕಿಯರ ಪ್ರೌಢಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಮುಗಿಸಿದರು. ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದುಕೊಂಡರು. ಕಾನೂನು ಪದವಿಯಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗಿದ್ದರು.
ಗಾಯತ್ರಿ ಅವರು ಬಂಗಾರಪೇಟೆಯ ನಾರಾಯಣಸ್ವಾಮಿ-ವೆಂಕಟಲಕ್ಷ್ಮಿ ದಂಪತಿಯ ಪುತ್ರಿ.