ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

Twitter
Facebook
LinkedIn
WhatsApp
images 3

ಮುಂಬೈ: ಕಳೆದ ಎರಡು ವರ್ಷಗಳಲ್ಲಿ ದೇಶಾದ್ಯಂತ ಒಂದು ಶತಕೋಟಿ ಭಾರತೀಯರಿಗೆ ನೀಡಲಾದ ಕೋವಿಡ್ 19 ಲಸಿಕೆಗಳಿಂದ “ಹಲವು ಅಡ್ಡ ಪರಿಣಾಮ”ಗಳು ಬೀರುತ್ತಿರುವುದು ಸತ್ಯ ಎಂಬುದಾಗಿ ಸರ್ಕಾರದ ಎರಡು ಉನ್ನತ ಸಂಸ್ಥೆಗಳು ಒಪ್ಪಿಕೊಂಡಿರುವುದು ಆರ್ ಟಿಐ ನಲ್ಲಿ ಬಹಿರಂಗವಾಗಿದೆ ಎಂದು ವರದಿ ತಿಳಿಸಿದೆ.

ಕೋವಿಶೀಲ್ಡ್ ನಿಂದ ಸಂಭವಿಸುವ ಅಡ್ಡ ಪರಿಣಾಮಗಳೇನು?
ಐಎಎನ್ ಎಸ್ ವರದಿ ಪ್ರಕಾರ, ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ನಂತರ ಇಂಜೆಕ್ಷನ್ ಚುಚ್ಚಿಸಿಕೊಂಡ ಭಾಗದಲ್ಲಿ ವಿಪರೀತ ನೋವು, ವಿವಿಧ ಕೆಂಪು ಕಲೆಗಳು, ಇಂಜೆಕ್ಷನ್ ಕೊಟ್ಟ ಜಾಗದಲ್ಲಿ ರಕ್ತ ಹೆಪ್ಪುಗಟ್ಟುವುದು, ನಿರಂತರ ವಾಂತಿ, ನಿರಂತರ ಕಿಬ್ಬೊಟ್ಟೆ ನೋವು ಅಥವಾ ವಾಂತಿ ಅಥವಾ ವಾಂತಿ ಇಲ್ಲದೇ ವಿಪರೀತ ತಲೆನೋವು, ಉಸಿರಾಟ ತೊಂದರೆ, ಎದೆ ನೋವು, ಕೈಕಾಲುಗಳಲ್ಲಿ ನೋವು, ನರಗಳ ಊತ, ಕಣ್ಣುಗಳಲ್ಲಿ ನೋವು, ದೃಷ್ಟಿ ಮಸುಕಾಗುವುದು, ನಿಶ್ಯಕ್ತಿ, ಕಾಲುಗಳಿಗೆ ಪಾರ್ಶ್ವವಾಯು ಸಾಧ್ಯತೆ ಕಂಡುಬರುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ

ಕೋವಿಡ್ 19ರ ಕೋವ್ಯಾಕ್ಸ್ ಲಸಿಕೆಯ ಅಡ್ಡಪರಿಣಾಮ:

ಕೋವ್ಯಾಕ್ಸ್ ಲಸಿಕೆ ಕೂಡಾ ಕೋವಿಶೀಲ್ಡ್ ನಂತೆಯೇ ಅಡ್ಡ ಪರಿಣಾಮ ಬೀರುತ್ತದೆ. ಇಂಜೆಕ್ಷನ್ ನೀಡಿದ ಸ್ಥಳದಲ್ಲಿ ವಿಪರೀತ ನೋವು, ಆಯಾಸ, ತಲೆನೋವು, ಜ್ವರ, ಸ್ನಾಯುಗಳ ನೋವು, ಕೀಲು ನೋವು, ವಾಂತಿ, ಶೀತ, ನಿಶ್ಯಕ್ತಿ, ತುರಿಕೆ, ಬೆನ್ನುನೋವು, ತಲೆಸುತ್ತು ಅಥವಾ ಅರೆ ಮಂಪರು ಪರಿಣಾಮ ಕಂಡುಬರಲಿದೆ ಎಂದು ಐಎಎನ್ ಎಸ್ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ