ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ- 10 ಮಂದಿ ಸಾವು...!

Twitter
Facebook
LinkedIn
WhatsApp
WhatsApp Image 2023 05 29 at 6.24.06 PM

ಮೈಸೂರು: ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ (Kollegal – T Narasipura Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಮೃತಪಟ್ಟವರು ಯಾರೆಲ್ಲ?

ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ಹೋಗಿದ್ದವರಿಗೆ ಹೊಂಚುಹಾಕಿದ್ದ ಜವರಾಯ

ಒಂದೇ ಕುಟಂಬದವರು ಎಲ್ಲರೂ ಇನೋವಾ ಕಾರಿನಲ್ಲಿ ಪ್ರವಾಸ ತೆರಳಿದ್ದರು. ಶನಿವಾರ ಮೈಸೂರಿಗೆ ಹೊರಟಿದ್ದರು. ಪ್ರವಾಸಕ್ಕೆ ಹೋಗಿದ್ದವರು ಮರಳಿ ಬರುವುದಿಲ್ಲ ಎಂದು ತಿಳಿದು ಸಂಗನಕಲ್​ನಲ್ಲಿ ಸ್ಮಶಾನ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಡಿಕ್ಕಿಯ ರಭಸಕ್ಕೆ ಇನ್ನೋವಾ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯಲು ಸ್ಥಳೀಯರು ಪರದಾಡುವಂತಾಯಿತು. ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲೋಹದ ಕಟರ್ ಬಳಸಿ ಕಾರಿನಿಂದ ಶವಗಳನ್ನು ಹೊರತೆಗೆದರು.

ಇನೋವಾದಲ್ಲಿ 13 ಜನರು ಇದ್ದರು ಮತ್ತು ಆ ಪೈಕಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

“ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಮಂದಿ ರಜೆಯಲ್ಲಿ ಬಂದಿದ್ದರು. ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗ ಬೆಟ್ಟಗಳಿಗೆ ಭೇಟಿ ನೀಡಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಇವರೆಲ್ಲರೂ ಬಳ್ಳಾರಿ ಸಮೀಪದ ಸಂಗನಕಲ್ ಗ್ರಾಮದಿಂದ ಬಂದಿದ್ದರು. ಸೋಮವಾರ ಸಂಜೆ 5 ಗಂಟೆಗೆ ರೈಲಿನಲ್ಲಿ ಬಳ್ಳಾರಿಗೆ ತೆರಳಬೇಕಿತ್ತು. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ