
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಬೆಂಗಳೂರು:ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ. ಅಲ್ಲದೆ ಪ್ರಾಥಮಿಕ ವಿಚಾರಣೆ ನಡೆಸಿ ವರ್ತಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಜಿಪಿ ಪ್ರವೀಣ್ ಸೂದ್ಗೆ ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವರ್ತಿಕಾ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆ್ಯಸಿಡ್ ಹಾಕುವುದಾಗಿ ಆ್ಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.
ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಆಗಮಿಸಿ ದೈಹಿಕವಾಗಿ ಹಲ್ಲೆ ಮಾಡುವುದಕ್ಕೆ ಸಂಚು ಮಾಡಲಾಗಿದ್ದು ನನ್ನ ಪೋಷಕರಿಗೆ ಕರೆ ಮಾಡಿ ಮನೆ ವಿಳಾಸ ತಿಳಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಈಗ ಮತ್ತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವರ್ತಿಕಾ ತನ್ನ ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್