Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಡಿವಿವಾದ: ಮಹಾರಾಷ್ಟ್ರ ಸಿಎಂ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸ‌ಭೆ!

Twitter
Facebook
LinkedIn
WhatsApp

ಬೆಳಗಾವಿ (ನ.21): ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಪ್ರಕರಣದ ಅಂತಿಮ ವಿಚಾರಣೆ ನವೆಂಬರ್ 23ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಬಲ ವಾದ ಮಂಡಿಸುವ ನಿಟ್ಟಿನಲ್ಲಿ ಚರ್ಚಿಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ 14 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ. ಇಂದು ಮಧ್ಯಾಹ್ನ 12ಗಂಟೆಗೆ ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಈ ಸಮಿತಿ ಸಭೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಕರ್ನಾಟಕ ಮಹಾರಾಷ್ಟ್ರ ಮಧ್ಯದ ಗಡಿ ವಿವಾದ ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುತ್ತೋ ಇಲ್ವೋ ಎಂಬ ಬಗ್ಗೆ ವಿಚಾರಣೆ ನವೆಂಬರ್ 23ರಂದು ನಡೆಯುವ ಹಿನ್ನೆಲೆಯಲ್ಲಿ ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಹೈಪವರ್ ಮೀಟಿಂಗ್‌ನಲ್ಲಿ ಬಿಜೆಪಿ, ಕಾಂಗ್ರೆಸ್, ಎನ್‍ಸಿಪಿ, ಶಿವಸೇನೆಯ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ. ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಮಾಜಿ ಸಿಎಂ ಪೃಥ್ವಿರಾಜ್ ಚೌಹಾನ್, ಮಹಾರಾಷ್ಟ್ರ ವಿಪಕ್ಷ ನಾಯಕ ಅಜಿತ್ ಪವಾರ್, ಅಂಬಾದಾಸ್ ದಾನ್ವೆ ಸೇರಿ 14 ಸದಸ್ಯರು ಭಾಗಿಯಾಗಲಿದ್ದಾರೆ. 

ಮಹಾರಾಷ್ಟ್ರದ ರಾಜಕೀಯ ಪಕ್ಷಗಳಿಗೆ ಪ್ರಮುಖ ರಾಜಕೀಯ ಅಸ್ತ್ರವಾಗಿರುವ ಗಡಿವಿವಾದ ಸಂಬಂಧದ ಸಭೆಯಲ್ಲಿ ಪಕ್ಷಾತೀತವಾಗಿ ಮಹಾರಾಷ್ಟ್ರದ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಮಹಾಜನ್ ಆಯೋಗದ ವರದಿ ತಿರಸ್ಕರಿಸಿ ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಇತ್ತೀಚೆಗಷ್ಟೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆರನ್ನು ಬೆಳಗಾವಿಯ ನಾಡದ್ರೋಹಿ ಎಂಇಎಸ್ ನಾಯಕರು ಭೇಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕ ಸರ್ಕಾರದ ನಡೆಯಿಂದ ಬೆಳಗಾವಿ ಕನ್ನಡಿಗರಿಗೆ ಆತಂಕ: ನವೆಂಬರ್ 23ರಂದು ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ 14 ಸದಸ್ಯರ ಉನ್ನತಮಟ್ಟದ ಸಮಿತಿ ರಚಿಸಿ ಇಂದು ಮುಂದಿನ ನಡೆ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ. ಆದ್ರೆ ಕರ್ನಾಟಕ ಸರ್ಕಾರ ಪ್ರಕರಣ ಗಂಭೀರವಾಗಿ ಪರಿಗಣಿಸುತ್ತಿಲ್ವಾ? ಎಂಬ ಪ್ರಶ್ನೆ ಬೆಳಗಾವಿ ಕನ್ನಡಿಗರಲ್ಲಿ ಮ‌ನೆ ಮಾಡಿದ್ದು ರಾಜ್ಯ ಸರ್ಕಾರದ ನಡೆಯಿಂದ ಬೆಳಗಾವಿ ಕನ್ನಡಿಗರಲ್ಲಿ ಆತಂಕ ಶುರುವಾಗಿದೆ. ಈಗಾಗಲೇ ಎಲ್ಲ ದಾಖಲೆ ಸಂಗ್ರಹಿಸಿ ಕಾನೂನು ಹೋರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಇತ್ತ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡನೆಗೆ ಸಮರ್ಥ ಕಾನೂನು ತಜ್ಞರ ತಂಡ ನೇಮಕಕ್ಕೆ ಅಡ್ವೋಕೇಟ್ ಜನರಲ್‌ಗೆ ಸೂಚನೆ ನೀಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಾದ ಬಳಿಕ ಈ ನಿಟ್ಟಿನಲ್ಲಿ ಯಾವುದೇ ಸಭೆ ನಡೆಸದಿದ್ದಕ್ಕೆ ಕನ್ನಡಪರ ಹೋರಾಟಗಾರರು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ