ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಣರಾಜ್ಯೋತ್ಸವ ಮರೆತು 'ಕ್ರಾಂತಿ' ಉತ್ಸವ ಮಾಡಿ ಎಂದ ನಟಿ ರಚಿತಾ ರಾಮ್ ವಿರುದ್ಧ ನೆಟ್ಟಿಗರ ಆಕ್ರೋಶ

Twitter
Facebook
LinkedIn
WhatsApp
rachita ram 6

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಬ್ಬರದ ಪ್ರಚಾರ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣ, ಯು ಟ್ಯೂಬ್ ಗಳಲ್ಲಿ ಪ್ರಚಾರ ಕಾರ್ಯ ಜೋರಾಗಿ ಸಾಗಿದೆ.  ಪ್ರಚಾರದ ಭಾಗವಾಗಿ ನಟಿ ರಚಿತಾ ರಾಮ್ ನೀಡಿರುವ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ.

ಇಷ್ಟು ವರ್ಷ ಜನವರಿ 26 ಅಂದ್ರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತು, ಕ್ರಾಂತಿ ಉತ್ಸವ ಅಷ್ಟೇ ಎಂದು ನಟಿ ರಚಿತಾ ರಾಮ್‌ ಹೇಳಿದರು.  ಈ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ, ಟ್ವಿಟರ್‌ನಲ್ಲಿ ನೆಟ್ಟಿಗರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಗಣರಾಜ್ಯೋತ್ಸವಕ್ಕಿಂತ ನಿಮ್ಮ ಚಿತ್ರ ದೊಡ್ಡದಾ, ಅನಕ್ಷರಸ್ಥೆ ಥರ ಮಾತನಾಡಬೇಡಿ ಮೊದಲು ದೇಶ ನಂತರ ಸಿನಿಮಾ  ಎಂದು ನೆಟ್ಟಿಗನೊಬ್ಬ ಹೇಳಿದ್ದಾನೆ. ಗಣರಾಜ್ಯೋತ್ಸವ ಮರೆತು ಕ್ರಾಂತಿ ನೋಡಬೇಕಾ? ನೀವು ಭಾರತೀಯರಾ? ಇಲ್ಲಿ ಇರಬೇಡಿ, ಪಾಕಿಸ್ತಾನಕ್ಕೆ ಹೋಗಿ ಮತ್ತೋರ್ವ ಹೇಳಿದ್ದಾನೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ