ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರು ಪೂರ್ಣಿಮೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Twitter
Facebook
LinkedIn
WhatsApp
ಗುರು ಪೂರ್ಣಿಮೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಆಚರಿಸಲಾಗುವ ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶುಭಾಶಯ‌ಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗುರು ಪೂರ್ಣಿಮೆಯ ಈ ಪಾವನ ದಿನದ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಆಷಾಢ ಪೂರ್ಣಿಮೆಯ ಧರ್ಮ ಚಕ್ರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಎಲ್ಲರಿಗೂ ಧರ್ಮಚಕ್ರ ಪ್ರವರ್ತನ ದಿವಸದ ಶುಭಾಶಯಗಳು. ಇಂದು ನಾವು ಗುರುಪೂರ್ಣಿಮೆಯನ್ನು ಆಚರಿಸುತ್ತೇವೆ ಹಾಗೂ ಇದೇ ದಿನದಂದು ಭಗವಾನ್‌ ಬುದ್ಧನು ಬುದ್ಧತ್ವವನ್ನು ಪಡೆದು ಜಗತ್ತಿಗೆ ಮೊದಲ ಜ್ಞಾನವನ್ನು ಕೊಟ್ಟ ದಿನ. ಎಲ್ಲಿ ಜ್ಞಾನವಿದೆಯೇ ಅದೇ ಪೂರ್ಣಿಮೆ ಎನ್ನಲಾಗುತ್ತದೆ ಎಂದು ಭಗವಾನ್‌ ಬುದ್ಧನ ಕುರಿತು ಹೇಳಿದರು.
ಇಂದು ಜಗತ್ತು ಕೋವಿಡ್​-19 ಸಾಂಕ್ರಾಮಿಕದಂಥ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಭಗವಾನ್​ ಬುದ್ಧನ ಬೋಧನೆಗಳು ಪ್ರಸ್ತುತವೆನಿಸುತ್ತವೆ. ಬುದ್ಧ ತೋರಿಸಿದ ಹಾದಿಯಲ್ಲೇ ಸಾಗಿ ಇಂದು ದೇಶ ಸಂಕಷ್ಟದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿದೆ. ಸಂಕಷ್ಟದ ಸಮಯದಲ್ಲಿ ಅನೇಕ ರಾಷ್ಟ್ರಗಳು ಒಗ್ಗಟ್ಟಾಗಿ ನಿಂತು ಪರಸ್ಪರ ಸಹಕಾರ ತೋರಿವೆ ಎಂದು ಮೋದಿ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು