- ರಾಜ್ಯ
- 10:49 ಫೂರ್ವಾಹ್ನ
- ಜನವರಿ 6, 2023
ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ!
Twitter
Facebook
LinkedIn
WhatsApp

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ.
ಹೌದು. ಚಾಮುಂಡಿಬೆಟ್ಟ (Chamundi Hills) ದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.
ಗುಜರಾತ್ (Gujrat) ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ (Bus Fire) ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.