ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾರ್ಮಾಡಿ ಘಾಟ್ ನಲ್ಲಿ ಕಾರು ಅಪಘಾತ, ಸಮಸ್ಯೆಯ ಸಂದರ್ಭದಲ್ಲಿ ಹಣ ಚಿನ್ನ ದೋಚಿದ ದರೋಡೆಕೋರರು!

Twitter
Facebook
LinkedIn
WhatsApp
ಚಾರ್ಮಾಡಿ ಘಾಟ್ ನಲ್ಲಿ ಕಾರು ಅಪಘಾತ, ಸಮಸ್ಯೆಯ ಸಂದರ್ಭದಲ್ಲಿ ಹಣ ಚಿನ್ನ ದೋಚಿದ ದರೋಡೆಕೋರರು!

ಚಿಕ್ಕಮಗಳೂರು (ಮೇ.6) : ವರ್ಷಪೂರ್ತಿ ತಣ್ಣನೆಯ ಗಾಳಿ. ಮುಗಿಲೆತ್ತರದ ಬೆಟ್ಟ-ಗುಡ್ಡ. ಸದಾ ಹಚ್ಚ ಹಸಿರಿನ ಸಿರಿ. ಇಲ್ಲಿನ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಸಾಗ್ತಿದ್ರೆ ಸ್ವರ್ಗ ಅಂಗೈಲಿ. ಮಲೆನಾಡ ಚಾರ್ಮಾಡಿಯಂದ್ರೆ ಪ್ರವಾಸಿಗ್ರು ನಿಂತಲ್ಲೇ ತೇಲ್ತಾರೆ. ಚಾರ್ಮಾಡಿಗೆ ಮನಸೋಲ್ದೆ ಇರರು. ಮತ್ತೊಂಡೆಡೆ ಪ್ರಕೃತಿಯ ಐಸಿರಿ ಜೊತೆಗೆ ಅಪಾಯವೂ ಈ ರಸ್ತೆಯಲ್ಲಿ ಅಡಗಿದೆ. ಅಪ್ಪಿತಪ್ಪಿ ಈ ರಸ್ತೆಯಲ್ಲಿ ರಾತ್ರಿ ವೇಳೆ ಸಂಚರಿಸುವ ವೇಳೆಯಲ್ಲಿ ವಾಹನ ಕೆಟ್ರೆ , ರಸ್ತೆಯಲ್ಲಿ ವಾಹನ ಅಪಘಾತ ಸಂಭವಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಇದಕ್ಕಿದಂತೆ ನಿದರ್ಶನ ಎನ್ನುವಂತೆ ಚಾರ್ಮಾಡಿ ರಸ್ತೆಯಲ್ಲಿ ನಡೆದಿರುವ ದರೋಡೆ (Robbery) ಪ್ರಕರಣ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದರೋಡೆ : ಪರಿಸ್ಥಿತಿಯ ದುರ್ಬಳಕೆ ಪಡೆದ ಕಳ್ಳರಿಂದ ನೀಚ ಕೃತ್ಯ
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ (Charmadi ghat) ರಸ್ತೆಯಲ್ಲಿ ಮೇ 3ರಂದು ನಡೆದ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರಿಸ್ಥಿತಿಯ ದುರ್ಬಳಕೆ ಪಡೆದ ಕಳ್ಳರು ನೀಚ ಕೃತ್ಯವನ್ನು ನಡೆಸಿದ್ದಾರೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುವ ವೇಳೆಯಲ್ಲಿ ಕಾರ್ ಯೊಂದು ಅಪಘಾತಕ್ಕೀಡಾಗಿದೆ.

ವಾಹನದಲ್ಲಿದ್ದ ಪ್ರಯಾಣಿಕರನ್ನು ಬೆದರಿಸಿ ಹಣ, ಉಂಗುರ ಹಾಗೂ ಮೊಬೈಲ್ ಕಸಿದುಕೊಂಡು ಹೋಗಿರುವ ಘಟನೆ ನಡೆದಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3 ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12.30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಘಾಟ್ ರಸ್ತೆಯಲ್ಲಿ ನೆಟ್ ವರ್ಕ್ ಇಲ್ಲದೇ ಪರದಾಟ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಪಘಾತಕ್ಕೆ ಒಳಾಗದ ಸಮಯದಲ್ಲಿ ಮಧುಸೂಧನ್ ಸಹಾಯಕ್ಕಾಗಿ ಮೊಬೈಲ್ ಮೂಲಕ ಸಂಪರ್ಕ ಮಾಡಲು ಮುಂದಾಗಿದ್ದಾರೆ. ಆದ್ರೆ ನೆಟ್ ವರ್ಕ್ ಸಮಸ್ಯೆಯಿಂದ ಕಾರಿನಲ್ಲೇ ಇರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ಸಮಯವಾದ ಕಾರಣ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿರುತ್ತೆ. ಯಾವುದೇ ವಾಹನಗಳು ರಸ್ತೆಯಲ್ಲಿ ಪಾಸ್ ಆಗದ ಕಾರಣ ಮಧುಸೂದನ್ ಸೇರಿ ಮೂವರು ಕಾರಿನಲ್ಲೆ ಕುಳಿತಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ರೂಪಾಯಿ ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಒಟ್ಟಾರೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಳವಾದ ಅಳವಾದ ಪ್ರಪಾತಗಳು ಒಂದಡೆಯಾದ್ರೆ ಮತ್ತೊಂದಡೆ ಕಳ್ಳರ ಕಾಟವೂ ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ತಪಾಸಣೆ ಸೇರಿದಂತೆ ಘಾಟ್ ರಸ್ತೆಯಲ್ಲಿ ಪೊಲೀಸ್ ಜೀಪ್ ನಲ್ಲಿ ಗಸ್ತು ತಿರುಗುವಂತಹ ವ್ಯವಸ್ಥೆ ಮಾಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist