![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಸಾಗೀರ್ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಹಲವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಮೀಪದಲ್ಲಿನ ಅತ್ತಿಗುಂಡಿ ಸಮೀಪ ಅವಘಡ ಸಂಭವಿಸಿದೆ. ಸಾಗೀರ್ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ಪ್ರವಾಸಿಗರನ್ನು ತುಂಬಿಕೊಂಡು ಪರ್ವತ ಪ್ರದೇಶದಲ್ಲಿ ವೇಗವಾಗಿ ಸಾಗುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕಂದಕದ ಕಡೆ ಉರುಳಿದೆ.
ಜೀಪಿನಲ್ಲಿ ಬೆಂಗಳೂರು ಮೂಲದ 15 ಕ್ಕೂ ಹೆಚ್ಚಿನ ಪ್ರವಾಸಿಗರಿದ್ದರು ಎಂದು ತಿಳಿದುಬಂದಿದ್ದು, ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ವಾಹನದಲ್ಲಿ ಮಿತಿಮೀರಿದ ಪ್ರವಾಸಿಗರನ್ನು ತುಂಬಿಸಿಕೊಂಡು ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದುದು ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist