ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಿಂದ ಬರುತ್ತಿದೆ ಕಳಪೆ ಬೀಜಗಳು. ಬೆಳಗಾವಿಯಲ್ಲಿ ರೈತರಿಗೆ ನೀಡಲಾಗಿದೆ ಎಚ್ಚರಿಕೆ

Twitter
Facebook
LinkedIn
WhatsApp
WhatsApp Image 2021 06 03 at 10.38.24 AM 1
ಬೆಳಗಾವಿ: ಚೀನಾದಿಂದ ಕಳಪೆ ಬೀಜಗಳು ಬರುತ್ತಿವೆ.ರೈತರು ಎಚ್ಚರದಿಂದ ಇರಬೇಕು ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಶಿವನಗೌಡ .ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ.ಈಗಾಗಲೇ ಇಂಗ್ಲೆಂಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳಿಸಲಾಗಿದೆ. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಎಲ್ಲಿಂದ ಕಳುಹಿಸುತ್ತಾರೆ ಎಂಬ ವಿವರಗಳೇ ಇರುವುದಿಲ್ಲ. ಈ ಬೀಜಗಳ ಬಳಕೆಯಿಂದ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ. ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆಯೂ ಇದೆ ಎಂದೂ ಅವರು ಎಚ್ಚರಿಸಿದ್ದಾರೆ. ಇಂತಹ ಬಿತ್ತನೆ ಬೀಜದ ಪೊಟ್ಟಣಗಳ ಪಾರ್ಸಲ್ ಬಂದರೆ ರೈತರು ವಾಪಸ್ ಕಳುಹಿಸಬೇಕು. ಒಂದು ವೇಳೆ ಸ್ವೀಕರಿಸಿದರೂ ಪೊಟ್ಟಣದ ಸಮೇತ ಅದನ್ನು ಸುಟ್ಟು ಹಾಕಬೇಕು ಇಲ್ಲವೆ, ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚೀನಾ ಗಳಿಂದ ಕಳಪೆ ಬೀಜಗಳು ಬರುತ್ತಿರುವುದು ಸಾಮಾನ್ಯವಾಗಿದೆ. ರೈತರು ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು