ಮಂಗಳವಾರ, ಫೆಬ್ರವರಿ 7, 2023
ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.-ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು-ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ-ಮಂಗಳೂರು: ವಿಷಾಹಾರ ಸೇವಿಸಿದ ನರ್ಸಿಂಗ್ ವಿದ್ಯಾರ್ಥಿಗಳ ಪೈಕಿ ಹಲವರು ಚೇತರಿಕೆ-ಬೆಳ್ತಂಗಡಿ: ಏಕಾಲದಲ್ಲಿ ಉಜಿರೆಯ ಲಾಡ್ಜ್‌‌ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ-ತುಮಕೂರು: ಬೈಕ್-ಲಾರಿ ನಡುವೆ ಅಪಘಾತ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ-T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ-ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜನವರಿ 27, 28ಕ್ಕೆ ಧಾರವಾಡ, ಬೆಳಗಾವಿಗೆ ಅಮಿತ್ ಶಾ ಭೇಟಿ

Twitter
Facebook
LinkedIn
WhatsApp
Amith Shah 1586857136 1589028929

ಬೆಳಗಾವಿ: ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ (BJP) ಗೆ ಶಕ್ತಿ ತುಂಬಲು ಬೆಳಗಾವಿಗೆ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಆಗಮಿಸುತ್ತಿದ್ದಾರೆ. ಕಿತ್ತೂರು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಬಂದಿದ್ದಾಯ್ತು, ಈಗ ಅಮಿತ್ ಶಾ ಸರದಿ ಬಂದಿದ್ದು ಜ.27 ಹಾಗೂ 28ರಂದು ಎರಡು ದಿನ ಅಮಿತ್ ಶಾ ಧಾರವಾಡ, ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜ.27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ.28ರ ಬೆಳಗ್ಗೆ 10 ಗಂಟೆಗೆ ಕುಂದಗೋಳಗೆ ತೆರಳಲಿದ್ದು, ಕುಂದಗೋಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗುತ್ತಾರೆ. ಬಳಿಕ ಕೆಎಲ್‍ಇ (KLE) ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧಾರವಾಡಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನ ಕೇಂದ್ರದ ಉದ್ಘಾಟನೆ ಮಾಡ್ತಾರೆ. ನಂತರ ಮಧ್ಯಾಹ್ನ 3.45ಕ್ಕೆ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಗೆ ಆಗಮಿಸಲಿದ್ದು ಬೆಳಗಾವಿಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ. 

ಜನವರಿ 28ರಂದು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬೃಹತ್ ಸಮಾವೇಶ ನಡೆಸಲಿದ್ದು ಕಿತ್ತೂರು ವಿಧಾನಸಭಾ ಕ್ಷೇತ್ರದ ಎಂ.ಕೆ.ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳ ಟಾರ್ಗೆಟ್ ಮಾಡಿ ಬಿಜೆಪಿ ಶಾಸಕ ಇರುವ ಕ್ಷೇತ್ರ ಕೇಂದ್ರವಾಗಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಬೈಲಹೊಂಗಲ, ಖಾನಾಪುರ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು, ಬೆಳಗಾವಿ ಗ್ರಾಮೀಣದಲ್ಲಿ- ಲಕ್ಷ್ಮಿ ಹೆಬ್ಬಾಳ್ಕರ್, ಬೈಲಹೊಂಗಲದಲ್ಲಿ – ಮಹಾಂತೇಶ ಕೌಜಲಗಿ, ಖಾನಾಪುರದಲ್ಲಿ – ಅಂಜಲಿ ನಿಂಬಾಳ್ಕರ್ ಹಾಲಿ ಕೈ ಶಾಸಕರಿದ್ದಾರೆ. ಮೂರು ಕ್ಷೇತ್ರಗಳ ಸಮೀಪದಲ್ಲಿರುವ ಎಂ.ಕೆ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಬೃಹತ್ ಸಮಾವೇಶ ಹಮ್ಮಿಕೊಂಡು ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಮುಂದಾಗಿದ್ದಾರೆ.

ಜ.28 ರಂದು ಬೆಳಗಾವಿಯಲ್ಲಿ ಸರಣಿ ಸಭೆ ನಡೆಸಲಿದ್ದು, ಜ.28ರ ಸಂಜೆ 6.30ರಿಂದ ರಾತ್ರಿ 10 ಗಂಟೆಯವರೆಗೆ ಸರಣಿ ಸಭೆಗಳನ್ನು ಆಯೋಜನೆ ಮಾಡಿದ್ದಾರೆ. ಜ.28ರ ಸಂಜೆ 6.30ರಿಂದ 7.30ರವರೆಗೆ ಸಂಘ ಪರಿವಾರದ ಹಿರಿಯರ ಜೊತೆ ಸಭೆ, ಬಳಿಕ ಸಂಜೆ 7.30 ರಿಂದ 8.30ರವರೆಗೆ ಪಕ್ಷದ ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪದಾಧಿಕಾರಿಗಳ ಸಭೆ,ರಾತ್ರಿ 8.30ರಿಂದ 10ಗಂಟೆಯವರೆಗೆ ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರ ಜೊತೆ ಸಭೆ, ಜ.28ರ ರಾತ್ರಿ 10.30ಕ್ಕೆ ಬೆಳಗಾವಿಯಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ