![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಟೋಕಿಯೋ:ಜಪಾನ್ ನ ಪೂರ್ವ ಭಾಗದಲ್ಲಿ ಬುಧವಾರ (ಮಾರ್ಚ್ 16) ರಾತ್ರಿ 7.4ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಟೋಕಿಯೋ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಗಿದ್ದು, ಫುಕುಶಿಮಾ ಸಮುದ್ರ ತೀರದಲ್ಲಿ ಸಣ್ಣ ಪ್ರಮಾಣದ ಸುನಾಮಿ ಎದ್ದಿರುವುದಾಗಿ ವರದಿ ವಿವರಿಸಿದೆ. ಈಶಾನ್ಯ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ಫುಕುಶಿಮಾ ಪ್ರದೇಶದ ಕರಾವಳಿಯಾಚೆ 60 ಕಿಲೋ ಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿರುವುದಾಗಿ ಭೂಗರ್ಭಶಾಸ್ತ್ರ ಇಲಾಖೆ ತಿಳಿಸಿದೆ. ಪ್ರಬಲ ಭೂಕಂಪದ ಪರಿಣಾಮ 20 ಲಕ್ಷಕ್ಕೂ ಅಧಿಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಸುಮಾರು 11 ವರ್ಷಗಳ ಹಿಂದೆ ಜಪಾನ್ ಉತ್ತರ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿತ್ತು. ಸುನಾಮಿಯಿಂದಾಗಿ ನ್ಯೂಕ್ಲಿಯರ್ ರಿಯಾಕ್ಟರ್ ಹಾನಿಗೊಂಡು ಭಾರೀ ಪ್ರಮಾಣದಲ್ಲಿ ವಿಕಿರಣಗಳು ಹೊರಸೂಸಿತ್ತು ಎಂದು ವರದಿ ತಿಳಿಸಿದೆ.
ಭೂಕಂಪದಲ್ಲಿ ನಾಲ್ವರು ಸಾವನ್ನಪ್ಪಿದ್ದು, 97 ಮಂದಿ ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಫ್ಯುಮಿಯೊ ಕಿಶಿಡಾ ಗುರುವಾರ(ಮಾರ್ಚ್ 17) ಸಂಸದೀಯ ಮಂಡಳಿಯಲ್ಲಿ ತಿಳಿಸಿದ್ದಾರೆ. ಪರಮಾಣು ಸ್ಥಾವರದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist