ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮೀರ್‌ ಮನೆ ಮೇಲೆ ನಡೆದಿದ್ದು ಇಡಿ ದಾಳಿ !

Twitter
Facebook
LinkedIn
WhatsApp
ಜಮೀರ್‌ ಮನೆ ಮೇಲೆ ನಡೆದಿದ್ದು  ಇಡಿ ದಾಳಿ !

ಬೆಂಗಳೂರು : ರಾಜ್ಯದಲ್ಲಿ ನಡೆದಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣ ಇದೀಗ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಉರುಳಾಗುವ ಸಾಧ್ಯತೆಯಿದೆ. ಇಂದು ಜಮೀರ್‌ ಖಾನ್‌ಗೆ ಸೇರಿದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಒಂದೆಡೆ ಮಾಜಿ ಸಚಿವ ರೋಷನ್‌ ಬೇಗ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಜಮೀರ್‌ ಮನೆ ಮೇಲೆಯೂ ದಾಳಿ ನಡೆದಿದೆ. ಆರಂಭದಲ್ಲಿ ಐಟಿ ದಾಳಿ ಎಂದು ಹೇಳಲಾಗುತ್ತಿದ್ರೂ ಕೂಡ ಇದೀಗ ಐಟಿ ಅಲ್ಲಾ ಇಡಿ ದಾಳಿ ನಡೆಸಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ದೆಹಲಿಯಿಂದ ಬಂದಿದ್ದ ಸುಮಾರು 45 ಮಂದಿ ಇಡಿ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ. ಜಮೀರ್‌ ಅಹ್ಮದ್‌ ಖಾನ್‌ ಅವರ ಕಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಬಳಿಯಲ್ಲಿ ರುವ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ, ಆಪ್ತ ಸಹಾಯಕನ ಮನೆ, ಅತ್ಯಾಪ್ತರ ನಿವಾಸ ಸೇರಿದಂತೆ ಒಟ್ಟು ೬ ಕಡೆಗಳಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್‌ ಅಹ್ಮದ್‌ ಭವ್ಯ ಬಂಗಲೆಯೊಂದನ್ನು ಕಟ್ಟಿಸಿದ್ದಾರೆ. ಅಲ್ಲೇ ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ್ದರು. ಅಲ್ಲದೇ ಹಲವು ಕಡೆಗಳಲ್ಲಿ ಆಸ್ತಿಯನ್ನು ಹೊಂದಿದ್ದು 2018ರಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ದಾಖಲೆಯಲ್ಲಿ 41 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿಕೊಂಡಿದ್ದರು.


ಇನ್ನು ಐಎಂಎ ಪ್ರಕರಣದ ರೂವಾರಿ ಮನ್ಸೂರ್‌ ಅಲಿಖಾನ್‌ ಜೊತೆ ಜಮೀರ್‌ ಅಹ್ಮದ್‌ ವ್ಯವಹಾರ ನಡೆಸಿರುವ ಕುರಿತು ದಾಖಲೆಗಳು ಲಭ್ಯವಾಗಿದೆಯಾ ಅನ್ನೋ ಪ್ರಶ್ನೆಯೆದ್ದಿದೆ. ಅಲ್ಲದೇ ಜಮೀರ್‌ ಅಹ್ಮದ್‌ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ನಿವೇಶನವೊಂದನ್ನು ಮಾರಾಟ ಮಾಡಿದ್ದರು. ಜೊತೆಗೆ ವಿದೇಶದಲ್ಲಿ ಕ್ಯಾಸಿನೋ ವ್ಯವಹಾರ ನಡೆಸಿರುವ ಕುರಿತು ಇಡಿ ಅಧಿಕಾರಿಗಳಿಗೆ ದಾಖಲೆಗಳು ಲಭ್ಯವಾಗಿದೆ ಎನ್ನಲಾಗುತ್ತಿದೆ.
ನ್ಯಾಷನಲ್‌ ಟ್ರಾವೆಲ್ಸ್‌ ಮುಖ್ಯ ಕಚೇರಿಯ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮುಂಬೈ ಹಾಗೂ ದೆಹಲಿಯಲ್ಲಿರುವ ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಮೇಲೆಯೂ ದಾಳಿ ನಡೆಸಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು