ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ ಗುಂಡಿಕ್ಕಿ ಹತ್ಯೆ

Twitter
Facebook
LinkedIn
WhatsApp
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ  ಗುಂಡಿಕ್ಕಿ ಹತ್ಯೆ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಭಾನುವಾರ ಮುಂಜಾನೆ ಜಮ್ಮುವಿನ ವಿಮಾನ ನಿಲ್ಧಾಣದಲ್ಲಿ ಬಾಂಬ್‌ ಸ್ಪೋಟಿಸುವ ಮೂಲಕ ಕುಕೃತ್ಯ ಮೆರೆದಿದ್ದ ಉಗ್ರರು ಆದೇ ದಿನ ರಾತ್ರಿ ವೇಳೆಗೆ ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರಿಯನ್ನು ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮರೆಸಿದ್ದಾರೆ. ಈ ಘಟನೆ ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ನಡೆದಿದೆ.

ಮಾಜಿ ಪೊಲೀಸ್ ಅಧಿಕಾರಿ ಮಾಜಿ ಎಸ್ಪಿಒ ಫಯಾಜ್ ಅಹ್ಮದ್ ಮನೆಗೆ ನುಗ್ಗಿದ ಉಗ್ರರು ನಿರಂತರ ಗುಂಡಿನ ಸುರಿಮಳೆಗೈದು ಅವರನ್ನು ಹಾಗೂ ಅವರ ಪತ್ನಿ, ಪುತ್ರಿ ಸೇರಿ ಮೂವನ್ನು ಕೊಂದು ಹಾಕಿ ಎಸ್ಕೇಪ್‌ ಆಗಿದ್ದಾರೆ. ಇನ್ನು ಗುಂಡಿನ ದಾಳಿಗೆ ಮಾಜಿ ಪೊಲೀಸ್ ಅಧಿಕಾರಿ ಫಯಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸೇರಿಸಿದ ಕೆಲವೇ ಹೊತ್ತಲ್ಲಿ ಪತ್ನಿ ರಾಜಾ ಬೇಗಂ ಕೂಡ ಸಾವನ್ನಪ್ಪಿದ್ದಾರೆ.

ಪುತ್ರಿ ರಫಿಯಾಗೆ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ ಅವರೂ ಬದುಕಲಿಲ್ಲ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ. ಇನ್ನು ನಾಪತ್ತೆಯಾಗಿರುವ ಉಗ್ರರಿಗೆ ಪೊಲೀಸರು ಹಾಗೂ ಯೋಧರು ಹುಡುಕಾಟ ಆರಂಭಿಸಿದ್ದಾರೆ. ಘಟನೆಯನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ತೀವ್ರವಾಗಿ ಖಂಡಿಸಿದ್ದಾರೆ.
ಭಾನುವಾರ ಬೆಳಗ್ಗೆ ಜಮ್ಮುವಿನ ಏರ್‌ಪೋರ್ಟ್‌ ಬಳಿ ಅವಳಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಡ್ರೋನ್‌ ಮೂಲಕ ಸ್ಪೋಟ ನಡೆಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು