ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಹೌದು.. ಸೆಕ್ಸ್ ಹಗರಣದಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಇಂದು ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಸಿಐಡಿ ಗೆ ದೂರು ನೀಡಿದ್ದಾರೆ.
ಮೂಲಗಳ ಪ್ರಕಾರ ಸುಮಾರು 40 ವರ್ಷ ವಯಸ್ಸಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ತಮ್ಮ ದೂರಿನಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ಮೇಲೆ 3 ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. ನಮ್ಮ ದೈಹಿಕ ಸಂಪರ್ಕದ ಸನ್ನಿವೇಶಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಅವುಗಳನ್ನು ಸಾಮಾಜಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬೆದರಿಸಿ ಪದೇ ಪದೇ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು.
ಜನವರಿ 1, 2021 ಮತ್ತು ಏಪ್ರಿಲ್ 25, 2024 ರ ನಡುವೆ ತನ್ನ ಮೇಲೆ ನಿರಂತರವಾ ಅತ್ಯಾಚಾರ ಮಾಡಿದ್ದು, ಲೈಂಗಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ಸಿಐಡಿ ಬಳಿ ಮೇ 1 ರಂದು ಪ್ರಕರಣ ದಾಖಲಿಸಿದ್ದು, ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐಆರ್ ದಾಖಲಾದಂತಾಗಿದೆ.
ಸಂತ್ರಸ್ಥೆಯ ದೂರಿನಲ್ಲೇನಿದೆ?
ಸಂತ್ರಸ್ಥೆ ನೀಡಿರುವ ದೂರಿನಲ್ಲಿ, ‘2021ರಲ್ಲಿ ಸರ್ಕಾರಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸಲು ತಾನು ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಭೇಟಿಯಾಗಲು ತೆರಳಿದ್ದೆ. ನಾನು ಸಂಸದ ಪ್ರಜ್ವಲ್ ರೇವಣ್ಣ ಕ್ವಾರ್ಟರ್ಸ್‌ನಲ್ಲಿ ಅವರನ್ನು ಭೇಟಿ ಮಾಡಿದ್ದೆ. ಪ್ರಜ್ವಲ್ ರೇವಣ್ಣ ಮೊದಲ ದಿನ ನನ್ನನ್ನು ಭೇಟಿ ಮಾಡಲಿಲ್ಲ. ಮರುದಿನ ಹಾಸನದ ಎಂಪಿ ನಿವಾಸಕ್ಕೆ ಪ್ರಜ್ವಲ್ ರೇವಣ್ಣ ತಮ್ಮನ್ನು ಕರೆಸಿಕೊಂಡಿಡರು. ನೆಲ ಮಹಡಿಯಲ್ಲಿ ಹೆಚ್ಚಿನ ಜನ ಇದ್ದರಿಂದ ಮೇಲ್ಮಹಡಿಯಲ್ಲಿ ಕಾಯುವಂತೆ ಹೇಳಿದ್ದಾರೆ. ಮೆಲ್ಮಹಡಿಯಲ್ಲಿ ಇನ್ನೂ ಕೆಲ ಮಹಿಳೆಯರು ಇದ್ದಾರೆ ಅವರ ಜೊತೆ ಕಾಯುವಂತೆ ಪ್ರಜ್ವಲ್ ರೇವಣ್ಣ ಸಂತ್ರಸ್ತೆಗೆ ಹೇಳಿದ್ದಾರೆ.
A former member of #Hassan Zilla Panchayat has accused #PrajwalRevanna of raping her multiple times over three years & videographing the alleged crime.
— South First (@TheSouthfirst) May 3, 2024
Case registered under Sections 376(2)(n) (commits rape repeatedly on the same woman), 506 (criminal intimidation),… pic.twitter.com/M9BOULXRar
ಸ್ವಲ್ಪ ಸಮಯದ ನಂತರ ಮೇಲೆ ಬಂದ ಪ್ರಜ್ವಲ್ ರೇವಣ್ಣ ಮೊದಲು ಬಂದಿದ್ದ ಮಹಿಳೆಯರನ್ನು ಮಾತಾಡಿಸಿ ಕಳುಹಿಸಿದ್ದಾರೆ. ನಂತರ ನನ್ನನ್ನು ಕೋಣೆಯೊಳೆಗೆ ಕರೆದು, ಬಾಗಿಲು ಹಾಕಿ ಕೈ ಹಿಡಿದು ಎಳೆದು ಮೈಮೆಲೆ ಎಳೆದುಕೊಂಡರು. ಸಂತ್ರಸ್ತೆ ಕೂಗಿಕೊಳ್ಳುವುದಾಗಿ ಹೇಳಿದಾಗ, ಪ್ರಜ್ವಲ್ ರೇವಣ್ಣ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ನಿನ್ನ ಗಂಡನಿಂದ ನನ್ನ ತಾಯಿಯ ಎಂಎಲ್ಎ ಟಿಕೆಟ್ ತಪ್ಪಿದೆ. ಅವನು ಜಾಸ್ತಿ ಮಾತಾಡುತ್ತಾನೆ ಸುಮ್ಮನೆ ಇರಲು ಹೇಳು ಎಂದು ಬೆದರಿಸಿದರು. ಅಲ್ಲದೆ ನೀನು ರಾಜಕೀಯವಾಗಿ ಬೆಳೆಯಬೇಕಾದರೆ ನಾನು ಹೇಳಿದಂತೆ ಕೇಳು ಎಂದು ಹೇಳಿದರು.
“ನಂತರ, ಅವರು ನನ್ನ ಬಟ್ಟೆಗಳನ್ನು ಬಿಚ್ಚಲು ನನ್ನನ್ನು ಕೇಳಿದರು ಮತ್ತು ನಾನು ಅದಕ್ಕೆ ನಿರಾಕರಿಸಿದೆ.. ನಾನು ಸಹಾಯಕ್ಕಾಗಿ ಕಿರುಚುತ್ತೇನೆ ಎಂದು ಹೇಳಿದೆ. ನಂತರ ಪ್ರಜ್ವಲ್ ತಮ್ಮ ಬಂದೂಕು ಹಿಡಿದುಕೊಂಡು ಬಂದು, ನನ್ನನ್ನು ಹಾಗೂ ನನ್ನ ಪತಿಯನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದರು. ಬಳಿಕ ಬಲವಂತವಾಗಿ ನನ್ನ ಬಟ್ಟೆಗಳನ್ನು ಬಿಚ್ಚಿ ನನ್ನ ಮೇಲೆ ಅತ್ಯಾಚಾರ ಮಾಡಿದರು.
ಅಲ್ಲದೆ ತಮ್ಮ ಮೊಬೈಲ್ ನಲ್ಲಿ ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡಿಕೊಂಡು ಯಾರಿಗಾದರೂ ತಿಳಿಸಿದರೆ ಇದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದರು. ಅದೇ ವೀಡಿಯೋಗಳನ್ನು ಇಟ್ಟುಕೊಂಡು ಫೋನ್ ಮೂಲಕ ವಿಡಿಯೋ ಕಾಲ್ ಮಾಡುತ್ತಿದ್ದರು. ಮತ್ತು ವಿಡಿಯೋ ಕಾಲ್ ನಲ್ಲೇ ನನಗೆ ಬೆತ್ತಲಾಗುವಂತೆ ಒತ್ತಾಯಿಸುತ್ತಿದ್ದರು. ಹೀಗೆ ಅವರು ನನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ತಾನು ಭಯದಿಂದ ಇದುವರೆಗೆ ದೂರು ನೀಡಿಲ್ಲ. ಆದರೆ ಪ್ರಜ್ವಲ್ ವಿರುದ್ಧದ ಆರೋಪಗಳ ಬಗ್ಗೆ ಪರಿಶೀಲಿಸಲು ಎಸ್‌ಐಟಿ ರಚಿಸಿರುವುದರಿಂದ ಈಗಲೇ ದೂರು ನೀಡುವುದು ಸೂಕ್ತ ಎಂದು ನಿರ್ಧರಿಸಿದೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಹಲವು ಸೆಕ್ಷನ್ ಗಳಲ್ಲಿ ಪ್ರಜ್ವಲ್ ರೇವಣ್ಣ ವಿರುದ್ದ ಪ್ರಕರಣ ದಾಖಲು
ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಜ್ವಲ್ ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎನ್) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುಗು), 354 (ಎ) (1) (ದೈಹಿಕ ಸಂಪರ್ಕ ಮತ್ತು ಅನಪೇಕ್ಷಿತ ಮತ್ತು ಸ್ಪಷ್ಟ ಲೈಂಗಿಕ ಪ್ರಚೋದನೆಗೆ ಒತ್ತಾಯ), 354 (ಬಿ) (ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಗೆ ಕ್ರಿಮಿನಲ್ ಬಲದ ಆಕ್ರಮಣ ಅಥವಾ ಒತ್ತಾಯ) 354(c) (voyeurism-ಅಶ್ಲೀಲ ಚಿತ್ರ ರೆಕಾರ್ಡ್ ಮಾಡಿಕೊಳ್ಳುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ವಿಭಾಗ 66(e) (ಗೌಪ್ಯತೆ ಉಲ್ಲಂಘನೆ)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.