ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೀಂ ಇಂಡಿಯಾ ಕಳಪೆ ಪ್ರದರ್ಶನ; 11 ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ ಪಂದ್ಯ ಗೆದ್ದ ಆಸ್ಟ್ರೇಲಿಯಾ!

Twitter
Facebook
LinkedIn
WhatsApp
ಟೀಂ ಇಂಡಿಯಾ ಕಳಪೆ ಪ್ರದರ್ಶನ; 11 ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ ಪಂದ್ಯ ಗೆದ್ದ ಆಸ್ಟ್ರೇಲಿಯಾ!

ವಿಶಾಖಪಟ್ಟಣಂ(ಮಾ.19): ಹರಸಾಹಸ ಮಾಡಿ ಭಾರತ 117 ರನ್ ಸಡಿಸಿ ನಿಟ್ಟುಸಿರುಬಿಟ್ಟಿತ್ತು. ಕನಿಷ್ಠ 100ರ ಗಡಿ ದಾಟಿತಲ್ಲ ಎಂದು ಅಭಿಮಾನಿಗಳು ತಮ್ಮನ್ನು ತಾವು ಸಮಾಧಾನ ಪಡಿಸಿಕೊಂಡರು. ಇತ್ತ ಮೊತ್ತ ಡಿಫೆಂಡ್ ಮಾಡಿಕೊಳ್ಳುವುದು ದೂರದ ಮಾತು ಅನ್ನೋದು ಮೊದಲೇ ಸ್ಪಷ್ಟವಾಗಿತ್ತು. ಆದರೆ ಕನಿಷ್ಠ ಹೋರಾಟ ನೀಡಲಿದೆ ಅನ್ನೋ ವಿಶ್ವಾಸವಿತ್ತು. ಆದರೆ ಭಾರತ ಒಂದೇ ಒಂದು ವಿಕೆಟ್ ಕಬಳಿಸಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾದ ಅಬ್ಬರಕ್ಕೆ ಹೇಳಹೆಸರಿಲ್ಲದಂತಾಯಿತು. ಕೇವಲ 11 ಓವರ್‌ಗಳಲ್ಲಿ ಆಸ್ಟ್ರೇಲಿಯಾ ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ. ಇದೀಗ 3ನೇ ಹಾಗೂ ಅಂತಿಮ ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ.

118 ರನ್ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ಯಾವುದೇ ಹಂತದಲ್ಲಿ ಆತಂಕ ಎದುರಿಸಲಿಲ್ಲ. ಸುಲಭ ಟಾರ್ಗೆಟ್ ಒಂದೆಡೆಯಾದರೆ, ಭಾರತ ನಿರೀಕ್ಷಿತ ಬೌಲಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಶ್ ಜೊತೆಯಾಟಕ್ಕೆ ಟೀಂ ಇಂಡಿಯಾ ಬಸವಳಿದಿತ್ತು. ಟಿ20 ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿತು.

ಅಬ್ಬರಿಸಿದ ಮಿಚೆಲ್ ಮಾರ್ಶ್ ಕೇವಲ 28 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಮಿಚೆಲ್ ಮಾರ್ಶ್ ಅಜೇಯ 66 ರನ್ ಸಿಡಿಸಿದರೆ, ಟ್ರಾವಿಸ್ ಹೆಡ್ ಅಜೇಯ 51ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಪಂದ್ಯ ಗೆದ್ದುಕೊಂಡಿತು. 10 ವಿಕೆಟ್ ಗೆಲುವು ದಾಖಲಿಸಿದ ಆಸೀಸ್, ಸರಣಿಯಲ್ಲಿ 1-1 ಸಮಬಲ ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ