ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆ ಶಿವಕುಮಾರೇ ಯಾಕೆ ಜಮೀರ್ ಮನೆ ಮೇಲೆ ರೇಡ್ ಮಾಡಿಸಿರಬಾರದು? ಎಂದು ಪ್ರಶ್ನಿಸಿದ ಎಸ್ ಟಿ ಸೋಮಶೇಖರ್.

Twitter
Facebook
LinkedIn
WhatsApp
ಡಿಕೆ ಶಿವಕುಮಾರೇ ಯಾಕೆ ಜಮೀರ್ ಮನೆ ಮೇಲೆ ರೇಡ್ ಮಾಡಿಸಿರಬಾರದು? ಎಂದು ಪ್ರಶ್ನಿಸಿದ ಎಸ್ ಟಿ ಸೋಮಶೇಖರ್.

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಯಾಕೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ರೇಡ್ ಮಾಡಿಸಿರಬಾರದು ಎಂದು ಸಚಿವ ಎಸ್ ಟಿ ಸೋಮಶೇಖರ್ ಪ್ರಶ್ನಿಸಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, “ ಜಮೀರ್ ಅಹ್ಮದ್ ಯಾವಗಲೂ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಹೇಳುತ್ತಲೇ ಇದ್ದರು. ಜಮೀರ್ ಅವರ ಈ ಹೇಳಿಕೆ ಡಿಕೆ ಶಿವಕುಮಾರ್ ಅವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಯಾಕೆ ಜಮೀರ್ ಮನೆ ಮೇಲೆ ಇಡಿ ದಾಳಿ ಮಾಡಿಸಿರಬಾರದು. ಅದು ಅಲ್ಲದೇ ಇಡಿ-ಐಟಿಯ ಲಿಂಕ್ ಡಿಕೆ ಶಿವಕುಮಾರ್ ಅವರಿಗಿದೆ. ಅವರು ಬಿಜೆಪಿ ಕಡೆಗೆ ಬೆಟ್ಟು ಮಾಡುವಾಗ ನಾವು ಹೀಗೆ ಕಾಂಗ್ರೆಸ್ ಕಡೆಗೆ ಬೆರಳು ತೋರಿಸಬಹುದು ಅಲ್ವಾ? ಅಂದು ತಿರುಗೇಟು ಕೊಟ್ಟಿದ್ದಾರೆ.
ನಿನ್ನೆ ದೆಹಲಿಯಿಂದ ಡಿಕೆ ಶಿವಕುಮಾರ್ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿಯನ್ನು ಖಂಡಿಸಿದ್ದರು. ಜೊತೆಗೆ ಇದು ಉದ್ದೇಶ ಪೂರ್ವಕ ದಾಳಿಯಾಗಿದೆ. ಬಿಜೆಪಿ ಅಧಿಕಾರವನ್ನು ದುರಪಯೋಗಪಡಿಸಿಕೊಳ್ಳುತ್ತಿದೆ ಎಂದಿದ್ದರು. ಇದಕ್ಕೆ ಇಂದು ಎಸ್ ಟಿ ಸೋಮಶೇಖರ್ ತಿರುಗೇಟು ಕೊಟ್ಟಿದ್ದಾರೆ.
ಇಡಿ ಮತ್ತು ಐಟಿ ಅವರ ಕೆಲಸ ಅವರು ಮಾಡುತ್ತಾರೆ. ಬೇಕಾದ ದಾಖಲಾತಿ ಹಾಗೂ ಮಾಹಿತಿಯನ್ನು ಸರಿಯಾಗಿ ನೀಡಿದರೆ ಆಯ್ತು. ಅದನ್ನು ಬಿಟ್ಟು ಬೇರೆ ರೀತಿ ಮಾತನಾಡುವುದು ಏನಿದೆ. ವ್ಯವಹಾರಗಳು ಸರಿಯಾಗಿದ್ದರೆ ಆಯ್ತು ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು