ಬುಧವಾರ, ಮಾರ್ಚ್ 29, 2023
ಮಗನ ಕತ್ತು ಕೊಯ್ದು ಕೊಂದ ತಂದೆ; ಮೂರು ವರ್ಷಗಳ ಹಿಂದೆ ಹೆಂಡತಿಯನ್ನು ನೇಣು ಹಾಕಿ ಕೊಂದಿದ್ದ!-ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಮೂವರ ಬಂಧನ-ರಾಜ್ಯದ ಅತಿ ಕಿರಿಯ ಮೇಯರ್​: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ-ಏ.1ರಿಂದ ಸಿಗರೇಟ್, ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ - ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು-ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ-ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Twitter
Facebook
LinkedIn
WhatsApp
accident159881221516070337361633061201

ಬೆಂಗಳೂರು: ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕಿ ಮಾಡಿದ ಎಡವಟ್ಟಿಗೆ ಬೆಂಗಳೂರಿನಲ್ಲಿ ಜೀವವೊಂದು ಬಲಿಯಾಗಿದೆ. ಹೆಸರಘಟ್ಟ ಮುಖ್ಯರಸ್ತೆಯ ಬಾಗಲಗುಂಟೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆಗಿದ್ದೇನು?: ಕಾರು ಚಲಾಯಿಸುತ್ತಿದ್ದ ಮಹಿಳೆ ಬಾಗಲಗುಂಟೆ ವೃತ್ತಕ್ಕೆ ಬರುವ ಹೊತ್ತಿಗೆ ಬ್ರೇಕ್ ಹಾಕುವ ಬದಲು ಎಕ್ಸಲೇಟರ್ ಒತ್ತಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಹೊಡೆದ ಗಡಿಬಿಡಿಗೆ ಆತಂಕದಿಂದ ಮಹಿಳೆ ಮತ್ತೆ ಎಕ್ಸಲೇಟರ್ ಒತ್ತಿದ್ದು ಬೈಕ್ ಚಾಲಕನನ್ನು 100 ಮೀಟರ್ ವರೆಗೆ ಎಳೆದುಕೊಂಡು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಬೈಕ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಸಂಚಾರಿ ಪೊಲೀಸರು ವಾಗನರ್ ಕಾರು ಚಾಲಕಿ ಶುಭ ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ