ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣ

Twitter
Facebook
LinkedIn
WhatsApp
ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣ

ಬೆಂಗಳೂರು: ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗುದ್ರಾಮ್‌, ಜುಗ್ ರಾಜ್ ಪ್ರಹಾಪತ್ ಎಂದು ಗುರುತಿಸಲಾಗಿದೆ. ರಾಜಸ್ಥಾನಕ್ಕೆ ತೆರಳಲು ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರ ತಲೆ ಡಿವೈಡರ್ ಗೆ ಬಡಿದಿತ್ತು. ಸ್ಥಳದಲ್ಲೇ ಓರ್ವ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಲಹಂಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಾಲಿ ಮನೆಯೊಂದರಲ್ಲಿ ಭಾರೀ ಪ್ರಮಾಣದ ನಕಲಿ ನೋಟುಗಳನ್ನು ವಶಕ್ಕೆ ಪಡೆದ ಕೇರಳ ಪೊಲೀಸ್: 

ಕೇರಳ: ಖಾಲಿ ಮನೆಯೊಂದರಲ್ಲಿ ಭಾರೀ ಪ್ರಮಾಣದ ನಿಷೇಧಿತ 1000 ಮುಖಬೆಲೆಯ ನಕಲಿ ನೋಟುಗಳನ್ನು (Fake Currency Notes) ಕೇರಳ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿಷೇಧಿತ 1000 ರೂ.ಗಳ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಹಿಂದೆ ರಿಯಲ್ ಎಸ್ಟೇಟ್ ಡೀಲರ್​ಗಳ ಪಾತ್ರವಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ರಾತ್ರಿ ವೇಳೆ ಖಾಲಿ ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸ್​ಐ ಮ್ಯಾಥ್ಯೂ, ಎಎಸ್​ಐ ಮಾಧವನ್, ಸಿಪಿಒ ದಿನೇಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಲಾಗಿದೆ ಎಂದು ಬದಿಯಡ್ಕ ಎಸ್​ಐ ಕೆ.ಪಿ.ವಿನೋದ್ ಕುಮಾರ್ ತಿಳಿಸಿದ್ದಾರೆ. ದಾಳಿ ವೇಳೆ ಹಾಸಿಗೆಯ ರೂಪದಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಹೀಗೆ ಪತ್ತೆಯಾದ ನಕಲಿ ನೋಟುಗಳನ್ನು ಆರು ದೊಡ್ಡ ಚೀಲಗಳಲ್ಲಿ ತುಂಬಿಸಬಹುದಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಕೆಲವು ಹಣದ ಬಂಡಲ್​​ಗಳಲ್ಲಿ, ನಕಲಿ ನೋಟುಗಳ ಒಳಗೆ ಬಿಳಿ ಕಾಗದಗಳನ್ನು ಇಡಲಾಗಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಕೆಲವು ರಿಯಲ್ ಎಸ್ಟೇಟ್ ವಿತರಕರು ಇದರ ಹಿಂದೆ ಇದ್ದಾರೆ ಎನ್ನಲಾಗುತ್ತಿದ್ದು, ಅವರ ಬಳಿ ಸಾಕಷ್ಟು ಹಣವಿರುವ ಕುರಿತು ಅನುಮಾನಗಳು ವ್ಯಕ್ತವಾಗಿವೆ ಎಂದು ಹೇಳಿದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist