ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!

Twitter
Facebook
LinkedIn
WhatsApp
ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!

ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ: ಹಿಂದಿ, ಕನ್ನಡ, ತೆಲುಗು, ತಮಿಳು ಹಲವು ಭಾಷೆಗಳ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಅಜಾಜ್ಜ್ ಖಾನ್ ಇತ್ತೀಚೆಗಷ್ಟೆ ಸುದ್ದಿಯಲ್ಲಿದ್ದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರಿಗೆ 156 ಮತಗಳಷ್ಟೆ ಬಿದ್ದಿದ್ದವು, ಆದರೆ ಅವರ ಇನ್​ಸ್ಟಾಗ್ರಾಂನಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳಿದ್ದಾರೆ. ಇದೀಗ ಅಜಾಜ್ ಖಾನ್​ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಜಾಜ್ ಖಾನ್ ಪತ್ನಿ ಫಲನ್ ಗುಲಿವಾಲ ಅವರನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನ ಅವರ ಜೋಗೇಶ್ವರಿ ನಿವಾಸದಲ್ಲಿಯೇ ಫಲನ್ ಗುಲಿವಾಲ ಅವರನ್ನು ಬಂಧಿಸಲಾಗಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಫಲನ್ ಬಂಧನ ಆಗಿದೆ.

ಕೆಲ ದಿನದ ಹಿಂದಷ್ಟೆ ಖಾನ್​ರ ಕಚೇರಿಯಲ್ಲಿ ಕೆಲಸ ಮಾಡುವ ಸೂರಜ್ ಗೌಡ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಪ್ರಶ್ನೆ ಮಾಡಿದ್ದರು. ಖಾನ್​ ಬಳಿ ಕೆಲಸ ಮಾಡುವ ಸೂರಜ್, ಕೆಲ ದಿನಗಳ ಹಿಂದೆ ಯೂರೋಪ್ ದೇಶದಿಂದ 100 ಗ್ರಾಂ ಮಾದಕ ವಸ್ತುವನ್ನು ಪಾರ್ಸಲ್ ಮೂಲಕ ತರಿಸಿಕೊಂಡಿದ್ದರಂತೆ. ಸೂರಜ್ ಗೌಡ ವಿಚಾರಣೆಯಿಂದ ಈ ಪ್ರಕರಣದಲ್ಲಿ ಅಜಾಜ್ ಖಾನ್ ಪತ್ನಿ ಫಲನ್ ಸಹ ಪಾಲಿರುವುದು ತಿಳಿದು ಬಂದು ಆಕೆಯನ್ನು ಸಹ ಇದೀಗ ಬಂಧಿಸಲಾಗಿದೆ.

ಅಜಾಜ್ ಖಾನ್​ರ ಜೋಗೇಶ್ವರಿ ಅಪಾರ್ಟ್​ಮೆಂಟ್​ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಅಧಿಕಾರಿಗಳಿಗೆ 150 ಗ್ರಾಂನಷ್ಟು ಗಾಂಜಾ ಮತ್ತು ಇತರೆ ಕೆಲವು ಮಾದಕ ವಸ್ತುಗಳು ದೊರೆತಿದ್ದವು. ಕಸ್ಟಮ್ಸ್ ಅಧಿಕಾರಿಗಳು ಫಲನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಅಜಾಜ್ ಖಾನ್ ಅನ್ನೂ ಸಹ ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಿದ್ದಾರೆ ಕಸ್ಟಮ್ಸ್ ಅಧಿಕಾರಿಗಳು.

ಅಜಾಜ್ ಖಾನ್​ ಬಾಲಿವುಡ್​ನ ಜನಪ್ರಿಯ ನಟ. ಕನ್ನಡ, ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಅಜಾಜ್ ಖಾನ್ ನಟಿಸಿದ್ದಾರೆ. ಅಂದಹಾಗೆ ಅಜಾಜ್ ಖಾನ್ ಸಹ ಈ ಹಿಂದೆ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಇದೀಗ ಅವರ ಪತ್ನಿ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ವಿಜಯಪುರದ ಸಮೈರಾ

ವಿಜಯಪುರ: ಗುಮ್ಮಟ ನಗರಿ ವಿಜಯಪುರ (Vijayapura) ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ (Youngest Pilot) ಆಗುವ ಮೂಲಕ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಜಗತ್ ವಿಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ.

18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಲೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.

ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣೆಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಸಾಧನೆ ಪ್ರೇರಣೆ ಆಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist