ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನಗಿಂತ ಐದು ವರ್ಷ ದೊಡ್ಡವಳ ಜೊತೆ ಶಾರುಖ್ ಮಗನ ಡೇಟಿಂಗ್

Twitter
Facebook
LinkedIn
WhatsApp
05 3

ಬಿಟೌನ್ ನಲ್ಲಿ ಒಂದು ಕಡೆ ಶಾರುಖ್ ನಟನೆಯ ಪಠಾಣ್ ಸಿನಿಮಾದ ಸದ್ದಾಗುತ್ತಿದ್ದರೆ, ಮತ್ತೊಂದು ಕಡೆ ಶಾರುಖ್ ಪುತ್ರನ ಡೇಟಿಂಗ್ ವಿಚಾರ ಬಾಲಿವುಡ್ ನಲ್ಲಿ ಗಿರಿಕಿ ಹೊಡೆಯುತ್ತಿದೆ. ಅಪ್ಪ ಪಠಾಣ್ ಸಿನಿಮಾದ ವಿವಾದದಲ್ಲಿ ತಲೆಬಿಸಿ ಮಾಡಿಕೊಂಡಿದ್ದರೆ, ಮಗ ಕೂಲ್ ಕೂಲ್ ಆಗಿ ನಟಿ ನೋರಾ ಫತೇಹಿ ಜೊತೆ ಡೇಟಿಂಗ್ ನಡೆಸಿದ್ದಾನೆ.

May be an image of 1 person

ಅದು ತನಗಿಂತ ಐದು ವರ್ಷ ದೊಡ್ಡವಳಿರುವ ಹುಡುಗಿಯ ಜೊತೆ ಎನ್ನುವುದು ಚರ್ಚೆಗೆ ಕಾರಣವಾಗಿದೆ. ಈ ಜೋಡಿಯ ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಸುದ್ದಿಗಳನ್ನು ಬಿತ್ತರಿಸುತ್ತಿವೆ.

May be an image of 1 person and standing

ಕೆಲ ತಿಂಗಳ ಹಿಂದೆಯಷ್ಟೇ ಡ್ರಗ್ಸ್ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಶಾರುಖ್ ಖಾನ್ ಪುತ್ರ ಆರ್ಯನ್, ಇದೀಗ ಡೇಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕೇವಲ 25ರ ವಯಸ್ಸಿನ ಈ ಹುಡುಗ 30ರ ಹರೆಯದ ನೋರಾ ಫತೇಹಿ ಜೊತೆ ಸುತ್ತುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ.

May be an image of 1 person, wrist watch and jewelry

ಅನೇಕ ಪಾರ್ಟಿಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಡೇಟಿಂಗ್ ವಿಚಾರವನ್ನು ಬಹಿರಂಗಗೊಳಿಸಿದೆ ಈ ಜೋಡಿ. ಕೆಲವರು ಕೇವಲ ಇದು ಫ್ರೆಂಡ್ ಶಿಪ್ ಎಂದು ಹೇಳುತ್ತಿದ್ದರೆ, ಇನ್ನೂ ಹಲವರು ಫ್ರೆಂಡ್ ಶಿಪ್ ಮೀರಿದ ಸ್ನೇಹವಿದು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

No photo description available.ನನಗೆ ನಟನಾಗಲು ಇಷ್ಟವಿಲ್ಲ. ತಂದೆಯಂತೆ ನಾನು ನಟನಾಗಲಾರೆ. ನಟನೆ ಅಂದರೆ ನನಗೆ ಅಷ್ಟಕಷ್ಟೆ ಎಂದು ಅನೇಕ ಬಾರಿ ಹೇಳಿರುವ ಆರ್ಯನ್, ತಾನು ಪ್ರೀತಿಸುತ್ತಿರುವುದು ನಟಿಯನ್ನು ಅನ್ನುವುದು ವಿಶೇಷ. ಆದರೆ, ಈ ಕುರಿತು ಇಬ್ಬರೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೇ ಇದ್ದರೂ, ಬಿಟೌನ್ ನಲ್ಲಿ ಮಾತ್ರ ಈ ಸುದ್ದಿ ಭಾರೀ ಮಹತ್ವ ಪಡೆದುಕೊಂಡಿದೆ. ಇಬ್ಬರ ಮಧ್ಯೆ ಏನೋ ನಡೆದಿದೆ ಎಂದು ಹೇಳಲಾಗುತ್ತಿದೆ.

No photo description available.

ಸದ್ಯ ಆರ್ಯನ್ ಖಾನ್ ಭರ್ಜರಿಯಾಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಿರ್ದೇಶಕನಾಗಿ ಅವರು ಚಿತ್ರರಂಗಕ್ಕೆ ಪ್ರವೇಶ ಮಾಡಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೂಡ ರೆಡಿ ಮಾಡಿಕೊಂಡಿದ್ದಾರೆ. ನಿರ್ದೇಶನಕ್ಕೆ ಬೇಕಿರುವ ಅಗತ್ಯ ತರಬೇತಿಯನ್ನೂ ಅವರು ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ತಮ್ಮ ಸಿನಿಮಾದ ಮಾಹಿತಿಯನ್ನು ಅವರು ಹಂಚಿಕೊಳ್ಳಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ