ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣಾಫ್ರಿಕಾದಲ್ಲಿ ರಾಜಕೀಯ ಸಂಘರ್ಷ. 70ಕ್ಕೂ ಅಧಿಕ ಭಾರತೀಯರ ಹತ್ಯೆ?

Twitter
Facebook
LinkedIn
WhatsApp
ದಕ್ಷಿಣಾಫ್ರಿಕಾದಲ್ಲಿ ರಾಜಕೀಯ ಸಂಘರ್ಷ. 70ಕ್ಕೂ ಅಧಿಕ ಭಾರತೀಯರ ಹತ್ಯೆ?

ದಕ್ಷಿಣ ಆಫ್ರಿಕಾ:ಭ್ರಷ್ಟಾಚಾರದ ಆರೋಪ ಹೊತ್ತಿರುವ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಬಂಧಿಸಲಾಗಿದ್ದು, ಅವರ ಬಂಧನದ ನಂತರ ದಕ್ಷಿಣ ಆಫ್ರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರದಲ್ಲಿ ಸುಮಾರು 70 ಭಾರತೀಯರು ಸೇರಿದಂತೆ 220 ಜನರು ಸಾವನ್ನಪ್ಪಿದ್ದಾರೆ.

ಭ್ರಷ್ಟಾಚಾರ ಆರೋಪದಡಿ ವಿಚಾರಣೆಗೆ ಹಾಜಗಾರಲು ವಿಫಲರಾದ ಜೂಮಾ ಅವರನ್ನು ನ್ಯಾಯಾಂಗ ನಿಂದನೆ ಅಡಿಯಲ್ಲಿ ಬಂಧಿಸುವಂಥೆ ಅಲ್ಲಿನ ಉನ್ನತ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿತ್ತು. ಕೋರ್ಟ್‌ ಸೂಚನೆಯಂತೆ ಜೂಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಂಧನವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 6ನೇ ದಿನವೂ ಹಿಂಸಾಚಾರ ಭುಗಿಲೆದ್ದಿದೆ.

ಇಡೀ ದೇಶಾದ್ಯಂತ ಮನೆಯಿಂದ ಹೊರಬರಲಾರದಂತಹ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಜನ ಊಟ-ತಿಂಡಿಯಿಲ್ಲದೆ ಕಂಗಾಲಾಗಿದ್ದಾರೆ. ಕೊರೊನಾ ಸಮಯದಲ್ಲಿ ಉದ್ಭವಿಸಿರುವ ಹಿಂಸಾಚಾರದಿಂದ ಸೂಕ್ತ ಚಿಕಿತ್ಸೆಯನ್ನೂ ಪಡೆಯಲಾಗದೇ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜಕೀಯ ಪ್ರಚೋದನೆಗೆ ಒಳಗಾದ ಗುಂಪು ಮಾರಕಾಸ್ತ್ರಗಳಿಂದ ಹೆಲ್ಲೆಗಳನ್ನು ನಡೆಸುತ್ತಿದ್ದು, ಕಳೆದ ಆರು ದಿನಗಳಿಂದ ಇದೂವರೆಗೂ 70 ಭಾರತೀಯರು ಸೇರಿದಂತೆ 220 ಜನರನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ, ಸುಮಾರು 78 ಔಷಧಿ ಅಂಗಡಿಗಳು, ಸುಮಾರು 300ಕ್ಕೂ ಹೆಚ್ಚು ಸೂಪರ್ ಮಾರುಕಟ್ಟೆಗಳನ್ನು ನಾಶಪಡಿಸಲಾಗಿದೆ.
ಪೆಟ್ರೋಲ್ ಬಾಂಬ್‍ಗಳನ್ನು ಎಸೆಯುವುದು, ಗುಂಡು ಹಾರಿಸುವುದು, ಮಾರಕಾಯುಧಗಳಿಂದ ಕಗ್ಗೊಲೆ ಮಾಡುವುದು, ಏಕಾಏಕಿ ನುಗ್ಗಿ ಲೂಟಿ ಮಾಡಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು