
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜು.15, 16ರಂದು ಆರೆಂಜ್ ಅಲರ್ಟ್ ಇದ್ದರೆ, 17ರಂದು ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ 15ರಂದು ಯೆಲ್ಲೋ ಅಲರ್ಟ್ ಇದ್ದರೆ, 16ರಿಂದ 18ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಗದಗ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 5 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದ್ದು, ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ
ನೀಡಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್