ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಕರ್ಫ್ಯೂ; ಇಲ್ಲಿದೆ ಸಂಪೂರ್ಣ ಮಾರ್ಗಸೂಚಿ.

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಕರ್ಫ್ಯೂ; ಇಲ್ಲಿದೆ ಸಂಪೂರ್ಣ ಮಾರ್ಗಸೂಚಿ.

ಮಂಗಳೂರು: ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದು ಆ.16 ವರೆಗೆ (ಶನಿವಾರ ಹಾಗೂ ರವಿವಾರ) ಜಾರಿಯಲ್ಲಿರುತ್ತದೆ. ಉಳಿದ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ.
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದು ಹಾಗೂ ಇದಕ್ಕೆ ಹೊಂದಿಕೊಂಡಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ದ.ಕ. ಸೇರಿದಂತೆ ಕೇರಳ ಮತ್ತು ಮಹಾರಾಷ್ಟ್ರ ಗಡಿಯಲ್ಲಿರುವ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂವನ್ನು ಆ.7ರಿಂದ ಅನ್ವಯಿಸಿ ಆ.16ರವರೆಗೆ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ವೀಕೆಂಡ್‌ ಕರ್ಫ್ಯೂ ಪ್ರಕಾರ, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ ತುರ್ತು ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲ ಕಾರ್ಯ-ಚಟುವಟಿಕೆಗಳಿಗೆ ಹಾಗೂ ಜನರ ಓಡಾಟಕ್ಕೆ ನಿರ್ಬಂಧ ಹಾಕಲಾಗಿದೆ. ಆ ಪ್ರಕಾರ, ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಹಾಲು, ಪಡಿತರ ಸಾಮಾಗ್ರಿಗಳ ವಿತರಣೆ ಅಂಗಡಿ, ಪ್ರಾಣಿಗಳ ಮೇವು ಮಾರಾಟ ಮಳಿಗೆ, ಬೀದಿಬದಿ ವ್ಯಾಪಾರವನ್ನು ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶವಿದೆ. ಮದ್ಯದಂಗಡಿಗಳಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಪಾರ್ಸೆಲ್‌ಗ‌ಳನ್ನು ತೆಗೆದುಕೊಂಡು ಹೋಗಲು ಮಾತ್ರ ಅನುಮತಿ ನೀಡಲಾಗಿದೆ. ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಹಾಗೆಯೇ, ಆಹಾರ ಖಾದ್ಯಗಳ ಹೋಂ ಡೆಲಿವರಿಯನ್ನು ದಿನದ 24 ಗಂಟೆ ನಡೆಸಬಹುದಾಗಿದೆ.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೂರ್ವ ನಿಗದಿತ ಮದುವೆ ಮತ್ತು ಕೌಟುಂಬಿಕ ಸಮಾರಂಭಗಳನ್ನು ರಾಜ್ಯ ಆದೇಶದಲ್ಲಿ 100 ಮಂದಿ ಸೇರಲು ಅವಕಾಶ ನೀಡಲಾಗಿದ್ದರೂ ದಕ್ಷಿಣ ಜಿಲ್ಲೆಗೆ ಸಂಬಂಧಪಟ್ಟಂತೆ ಇದರಲ್ಲಿ ಮಾರ್ಪಾಡು ಮಾಡಲಾಗಿದ್ದು, ಕೇವಲ 50 ಮಂದಿಯನ್ನು ಮೀರದಂತೆ ನಡೆಸಬಹುದು. ಅಂತ್ಯಸಂಸ್ಕಾರಗಳಲ್ಲಿ ಜನರ ಮಿತಿಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ.

ರೋಗಿಗಳು ಮತ್ತು ಅವರ ಸಹಾಯಕರು, ಲಸಿಕೆ ಪಡೆಯಲು ಹೋಗುವವರು ಅದಕ್ಕೆ ಪೂರಕವಾದ ದಾಖಲೆಗಳನ್ನು ತೋರಿಸಿ ಸಂಚರಿಸಬಹುದು. ರೈಲು ಮತ್ತು ವಿಮಾನ ಹಾರಾಟ ಅಬಾಧಿತವಾಗಿರಲಿದೆ. ಬಸ್ಸುಗಳು ಸೇರಿದಂತೆ ಸಾರ್ವಜನಿಕ ಸಾರಿಗೆ, ರೈಲು, ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರೈಲು, ಬಸ್‌, ವಿಮಾನ ನಿಲ್ದಾಣಗಳಿಗೆ ಹೋಗಿ, ಬರುವ ಖಾಸಗಿ ವಾಹನಗಳು ಹಾಗೂ ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಸಂಚಾರದ ದಾಖಲೆಗಳನ್ನು ಇಟ್ಟುಕೊಳ್ಳಬೇಕು.

ಎಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಹಾಗೂ ಅವುಗಳ ಸ್ವಾಯತ್ತ ಸಂಸ್ಥೆಗಳ ಕಚೇರಿಗಳು ತೆರೆದಿರಲಿವೆ. ಅಗತ್ಯ ಸೇವೆಗಳನ್ನು ಒದಗಿಸುವ ಕೈಗಾರಿಕೆಗಳು, ಕಂಪೆನಿಗಳು, ಸಂಸ್ಥೆಗಳು ದಿನವಿಡಿ ತೆರೆಯಲು ಅನುಮತಿಸಲಾಗಿದೆ. ಈ ಸಂಸ್ಥೆಗಳ ಸಿಬ್ಬಂದಿ ಕಚೇರಿಯ ಗುರುತು ಕಾರ್ಡ್‌ ತೋರಿಸಿ ಸಂಚರಿಸಬಹುದು. ಟೆಲಿಕಾಂ, ಇಂಟರ್ನೆಟ್‌ ಸರ್ವಿಸ್‌ ಪ್ರೊವೈಡರ್‌ಗಳ ಸಿಬ್ಬಂದಿ ಮತ್ತು ವಾಹನಗಳು ತಮ್ಮ ಐಡಿ ಕಾರ್ಡ್‌ ತೋರಿಸಿ ಸಂಚರಿಸಬಹುದು. ಐಟಿ ಕಂಪೆನಿಗಳ ಅವಶ್ಯಕ ಸಿಬ್ಬಂದಿ ಮಾತ್ರ ಸಂಚರಿಸಲು ಅವಕಾಶ, ಉಳಿದವರು ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ.

ದೇವಾಲಯಗಳು ಸೇರಿದಂತೆ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಬಹುದು. ಆದರೆ ಯಾವುದೇ ರೀತಿಯಲ್ಲೂ ಜನರು ಜಮಾವಣೆಯಾಗುವುದು, ಜಾತ್ರೆ, ಹಬ್ಬಗಳು, ಮೆರವಣಿಗೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು