ಮಂಗಳವಾರ, ಜುಲೈ 16, 2024
K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!

Twitter
Facebook
LinkedIn
WhatsApp
ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!

ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan), ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಜೂನ್ 11ರಂದು ಈ ಬಂಧನ ನಡೆದಿದ್ದು, ಅಲ್ಲಿಂದ ಇಲ್ಲಿಯವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಇಂದು (ಜೂನ್ 10) ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಹೀಗಾಗಿ ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. ಎರಡನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರಿಪಡಿಸಲಿದ್ದಾರೆ.

ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ.  ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ದರ್ಶನ್ ಅವರು ಜೈಲು ಪಾಲಾಗಿದ್ದರು. 14 ದಿನ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ