ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

Twitter
Facebook
LinkedIn
WhatsApp
ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

ನವದೆಹಲಿ: ಒಂದೆಡೆ ಶತಕ ಬಾರಿಸಿರುವ ಪೆಟ್ರೋಲ್ ಬೆಲೆ, ಇನ್ನೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅದರ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ತೈಲ ಕಂಪನಿಗಳು ಗೃಹ ಬಳಕೆಯ ಅಡುಗೆ ಅನಿಲದ ಪ್ರತೀ ಸಿಲಿಂಡರ್‌ ಬೆಲೆಯಲ್ಲಿ ₹ 25.50 ಹೆಚ್ಚಳ ಮಾಡಿವೆ.

ಈ ಮೂಲಕ 14.2 ಕೆಜಿ ತೂಕದ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ ₹ 834.50 ಆಗಿದೆ. ಇತ್ತ, 19 ಕೆಜಿ ಸಿಲಿಂಡರ್ ಬೆಲೆಯಲ್ಲೂ ಸಹ ₹ 76 ಹೆಚ್ಚಿಸಲಾಗಿದ್ದು, ₹ 1,550 ಆಗಿದೆ. ಮುಂಬೈ ಮತ್ತು ಕೋಲ್ಕತ್ತಾದಲ್ಲೂ ಸಿಲಿಂಡರ್‌ ಬೆಲೆ ₹ 834.50 ಆಗಿದ್ದು, ಚೆನ್ನೈನಲ್ಲಿ ಒಂದು ಎಲ್‌ಪಿಜಿ ಸಿಲಿಂಡರ್‌ಗೆ ₹ 850.50 ಆಗಿದೆ. ಎಲ್‌ಪಿಜಿ ಬೆಲೆಗಳನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಿಸಲಾಗುತ್ತದೆ ಮತ್ತು ಜುಲೈ 1ರ ಈ ಹೊಸ ಪರಿಷ್ಕರಣೆ ಸೇರಿ ಆರು ತಿಂಗಳಲ್ಲಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ₹ 140 ರಷ್ಟು ಹೆಚ್ಚಾಗಿದೆ. ದೇಶದ ಹಲವು ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿರುವ ಬೆನ್ನಲ್ಲೇ ಸಿಲಿಂಡರ್ ಬೆಲೆ ಏರಿಗೆ ಜನರಿಗೆ ನುಂಗಲಾರದ ತುತ್ತಾಗಿದೆ.

ಫೆಬ್ರವರಿಯಲ್ಲಿ, ಎಲ್‌ಪಿಜಿ ಬೆಲೆಗಳನ್ನು ಮೂರು ಬಾರಿ ಪರಿಷ್ಕರಿಸಲಾಗಿತ್ತು. ಫೆಬ್ರವರಿ 4 ರಂದು ಸಿಲಿಂಡರ್‌ಗೆ ₹25, ಫೆಬ್ರವರಿ 15 ರಂದು ₹50 ಮತ್ತು ಫೆಬ್ರವರಿ 25 ರಂದು ₹25 ಹೆಚ್ಚಳವಾಗಿತ್ತು. ಮಾರ್ಚ್‌ನಲ್ಲಿ, ಮತ್ತೆ ₹ 25 ರಷ್ಟು ಹೆಚ್ಚಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು