‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ ಚಿತ್ರಕ್ಕೆ ‘ಕಾಂತಾರ’ ಹುಡುಗಿ ಹೀರೋಯಿನ್
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ಚಿರಪರಿಚಿತರಾದ ಸಪ್ತಮಿ ಗೌಡ (Saptami Gowda), ಇದೀಗ ಸದ್ದಿಲ್ಲದೇ ಬಾಲಿವುಡ್ (Bollywood)ಗೆ ಎಂಟ್ರಿ ಪಡೆದಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಒಂದು ಹಂತದ ಚಿತ್ರೀಕರಣ ಕೂಡ ಮುಗಿದಿದ್ದು, ಎರಡನೇ ಹಂತದ ಶೂಟಿಂಗ್ ನಲ್ಲಿ ಸಪ್ತಮಿ ಪಾಲ್ಗೊಂಡಿದ್ದಾರೆ.
ಕಾಂತಾರ ಸಿನಿಮಾ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಈಗಾಗಲೇ ಆಸ್ಕರ್ ಅಂಗಳದಲ್ಲಿವೆ. ಎರಡೂ ಚಿತ್ರಗಳ ನಡುವೆ ಪೈಪೋಟಿಯೂ ಏರ್ಪಡಬಹುದು. ಇಂತಹ ಹೊತ್ತಿನಲ್ಲಿ ಸಪ್ತಮಿ ಗೌಡ ಅವರಿಗೆ ಬಾಲಿವುಡ್ ಗೆ ಹೋಗುವಂತಹ ಅವಕಾಶ ಸಿಕ್ಕಿದೆ. ಅದರಲ್ಲೂ ಕಳೆದ ವರ್ಷ ಬಾಕ್ಸ್ ಆಫೀಸ್ ದೋಚಿದ್ದ ವಿವೇಕ್ ಅಗ್ನಿಹೋತ್ರಿ ಜೊತೆ ಕೆಲಸ ಮಾಡಲು ಅವರು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ಕನ್ನಡದ ಕಾಳಿ ಚಿತ್ರಕ್ಕೂ ಸಪ್ತಮಿ ಗೌಡ ಸಹಿ ಮಾಡಿದ್ದಾರೆ.