ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದುಷ್ಟ ಶಕ್ತಿ ಓಡಿಸುವುದಾಗಿ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Twitter
Facebook
LinkedIn
WhatsApp
2608788573985947636

ಮುಂಬೈ: ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರ್​ಗೂರಿನಲ್ಲಿ ನಡೆದಿದೆ.ಆರ್ಯನ್​ ದೀಪಕ್​ ಲಂಡ್ಗೆ(14) ಮೃತ ದುರ್ದೈವಿ ಎಂದು ತಿಳಿದಿ ಬಂದಿದ್ದು ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. 

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್​ ಕಳೆದ ಕೆಲವು ದಿನಗಳಿಂದ ತೀವ್ರ ಜ್ಷರದಿಂದ ಬಳಲುತ್ತಿದ್ದ ವೈದ್ಯರು ಹಾಗೂ ಆಯುರ್ವೇದದ ಔಷಧಿಗಳಿಗೂ ಆತ ಗುಣಮುಖನಾಗಿರಲಿಲ್ಲ. ಇದೇ ವೇಳೆ ಆರ್ಯನ್​ ಕುಟುಂಬಸ್ಥರಿಗೆ ಸ್ನೇಹಿತರೊಬ್ಬರು ಶಿರಗೂರಿನಲ್ಲಿರುವ ಮಂತ್ರವಾದಿ ಅಪ್ಪಾ ಸಾಹೇಬ್ ಕುರಿತು ಹೇಳಿ ಭೇಟಿ ನೀಡುವಂತೆ ಹೇಳಿದ್ದಾರೆ. ಸ್ನೇಹಿತನ ಮಾತನ್ನು ನಂಬಿದ ಕುಟುಂಬಸ್ಥರು ಅಸ್ವಸ್ಥ ಆರ್ಯನ್​ನನ್ನು ಕರೆದುಕೊಂಡು ಶಿರಗೂರಿನಲ್ಲಿರುವ ಅಪ್ಪಾ ಸಾಹೇಬ್​ನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಆರೋಪಿಯೂ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಆತನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ. 

ತೀವ್ರವಾಗಿ ಗಾಯಗೊಂಡಿದ್ದ ಅಸ್ವಸ್ಥ ಬಾಲಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್​ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ವಿಚಾರವನ್ನು ತಿಳಿದ ಅಂಧಶ್ರದ್ಧಾ ನಿರ್ಮೂಲನೆ ಸಮಿತಿ ಸದಸ್ಯರು ಮೃತ ಬಾಲಕಮನ ಕುಟುಂಬಸ್ಥರನ್ನು ಮನವೊಲಿಸಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ ಮತ್ತು ಮಂತ್ರವಾದಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ