ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್

Twitter
Facebook
LinkedIn
WhatsApp
New Project 2023 01 08T065326.783

ಬೆಂಗಳೂರು: ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ನಡೆದ ಪ್ರಕರಣ ಸಂಬಂಧ ಆರೋಪಿ ಮುನಿಕೃಷ್ಣನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೇ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ಎಳೆದೊಯ್ದಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು, ಈ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪ್ರಕರಣ ಬೆಳಕಿಗೆ ಬಂದು ಠಾಣೆ ಮೆಟ್ಟಿಲೇರುತ್ತಿದ್ದಂತೆ ಧರ್ಮದರ್ಶಿ ಮುನಿಕೃಷ್ಣ ಪೊಲೀರ ಮುಂದೆ ಹೇಳಿದ್ದೇ ಬೇರೆ. ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿದ್ದಾರೆ.

ಎಷ್ಟೇ ಮನವಿ ಮಾಡಿಕೊಂಡರೂ ಮಹಿಳೆಗೆ ಕೇಳದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಮುನಿಕೃಷ್ಣನನ್ನು ಬಂಧಿಸಿದ ಅಮೃತಹಳ್ಳಿ ಠಾಣೆ ಪೊಲೀಸರು, ವಿಚಾರಣೆಯನ್ನು ಮುಂದುವಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ