ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ತೆಂಗಿನಕಾಯಿ ಬೆಳೆಯುವಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಪ್ರಥಮ ಸ್ಥಾನ ಯಾವ ರಾಜ್ಯಕ್ಕೆ ಗೊತ್ತೆ?

Twitter
Facebook
LinkedIn
WhatsApp
ದೇಶದಲ್ಲಿ ತೆಂಗಿನಕಾಯಿ ಬೆಳೆಯುವಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಪ್ರಥಮ ಸ್ಥಾನ ಯಾವ ರಾಜ್ಯಕ್ಕೆ ಗೊತ್ತೆ?

ತೆಂಗಿನಕಾಯಿ ಭಾರತದ ಅಡುಗೆಗೆ ಅಗತ್ಯವಾಗಿರುವ ಒಂದು ಪ್ರಮುಖ ಕಚ್ಚಾವಸ್ತು. ತೆಂಗಿನಕಾಯಿ ಎಣ್ಣೆಗೂ ಉಪಯೋಗವಾಗುತ್ತದೆ.

ಈ ತೆಂಗಿನಕಾಯಿ ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನವನ್ನು ಕೇರಳ ರಾಜ್ಯ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ತಮಿಳುನಾಡು ಪಡೆದುಕೊಂಡಿದೆ. ದೇಶದ ಸುಮಾರು 35 ಶೇಕಡ ತೆಂಗಿನಕಾಯಿ ಉತ್ಪಾದನೆ ಕೇರಳ ರಾಜ್ಯದಲ್ಲಿ ಆಗುತ್ತದೆ. ಕರ್ನಾಟಕದಲ್ಲಿ ಸುಮಾರು 26 ಶೇಕಡ ತೆಂಗಿನಕಾಯಿ ಉತ್ಪಾದನೆಯಾಗುತ್ತದೆ. ತಮಿಳುನಾಡಿನಲ್ಲಿ ಶೇಕಡ 25ರಷ್ಟು ತೆಂಗಿನಕಾಯಿ ಉತ್ಪಾದನೆಯಾಗುತ್ತದೆ. ದೇಶದ ತೆಂಗಿನಕಾಯಿ ಉತ್ಪಾದನೆಯ ಶೇಕಡ 75ರಷ್ಟು ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಆಗುತ್ತದೆ.

ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒರಿಸ್ಸಾ ರಾಜ್ಯಗಳಲ್ಲಿ ತೆಂಗಿನಕಾಯಿಯನ್ನು ಬೆಳೆಯಲಾಗುತ್ತದೆ. ಕೇರಳ ರಾಜ್ಯದ ಬಹುತೇಕ ಪ್ರದೇಶಗಳು ತೆಂಗಿನಕಾಯಿಯನ್ನು ಬೆಳೆಯುತ್ತವೆ. ತೆಂಗಿನಕಾಯಿಯ ಉಪಉತ್ಪನ್ನಗಳನ್ನು ಬೆಳೆಯುವಲ್ಲಿ ಕೇರಳ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆ.

ಕಲ್ಪವೃಕ್ಷ ಎಂದು ಕರೆಯಲಾಗುವ ತೆಂಗಿನಕಾಯಿ ಕೇರಳ ರಾಜ್ಯಕ್ಕೆ ಉತ್ತಮವಾದ ಆನೆಯನ್ನು ತಂದುಕೊಡುವ ಪ್ರಮುಖ ಬೆಳೆಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇರಳ ರಾಜ್ಯದಲ್ಲಿ ಉತ್ಪಾದನೆಯ ಕುಸಿತ ಆರಂಭವಾಗಿದೆ. ಅದಕ್ಕೆ ವಿವಿಧ ಕಾರಣಗಳು ಇವೆ. ಅನಿಯಮಿತ ಮಳೆ ಹಾಗೂ ಪ್ರವಾಹದ ಕಾರಣದಿಂದಾಗಿ ಕೇರಳದಲ್ಲಿ ತೆಂಗಿನಕಾಯಿಯ ಉತ್ಪಾದನೆಗೆ ಸ್ವಲ್ಪ ಹೊಡೆತ ಬಿದ್ದಿದೆ.

ಕರ್ನಾಟಕದಲ್ಲಿ ತುಮಕೂರು, ಕೋಲಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ತೆಂಗಿನಕಾಯಿ ಬೆಳೆಯಲಾಗುತ್ತದೆ. ತುಮಕೂರು ತೆಂಗಿನಕಾಯಿ ಬೆಳೆಗೆ ಬಹಳಷ್ಟು ಹೆಸರುವಾಸಿ. ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಪ್ರದೇಶಗಳಲ್ಲಿ ತೆಂಗಿನಕಾಯಿಯನ್ನು ಬಹಳಷ್ಟು ಬೆಳೆಯಲಾಗುತ್ತದೆ. ಕೇರಳ ಮತ್ತು ಕರ್ನಾಟಕದಲ್ಲಿ ತೆಂಗಿನಕಾಯಿ ವ್ಯಾಪಕವಾಗಿ ಬೆಳೆಯುವುದರಿಂದ ಹಲವಾರು ತೆಂಗಿನಕಾಯಿ ಎಣ್ಣೆ ಯ ಉದ್ದಿಮೆಗಳು ಆರಂಭಗೊಂಡಿವೆ. ಇದು ಬಹಳಷ್ಟು ಜನರಿಗೆ ಉದ್ಯೋಗದ ಅವಕಾಶಗಳನ್ನು ಸೃಷ್ಟಿ ಮಾಡಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು