ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದ ಸ್ವಾತಂತ್ರ್ಯ ಉತ್ಸವಕ್ಕೆ ಪುತ್ತೂರಿನಲ್ಲಿ ಅಡ್ಡಿಪಡಿಸಿದ ತಾಲಿಬಾನಿ ಸಂಸ್ಕೃತಿಗೆ ನಮ್ಮಲ್ಲಿ ಅವಕಾಶವಿಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ.

Twitter
Facebook
LinkedIn
WhatsApp
ದೇಶದ ಸ್ವಾತಂತ್ರ್ಯ ಉತ್ಸವಕ್ಕೆ ಪುತ್ತೂರಿನಲ್ಲಿ ಅಡ್ಡಿಪಡಿಸಿದ ತಾಲಿಬಾನಿ ಸಂಸ್ಕೃತಿಗೆ ನಮ್ಮಲ್ಲಿ ಅವಕಾಶವಿಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ.

ಮಂಗಳೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಕಬಕದಲ್ಲಿ ವೀರಸಾರ್ವಕರ್ ಫೋಟೋ ತೆಗೆದು, ಟಿಪ್ಪು ಸುಲ್ತಾನ್ ಫೋಟೋ ಹಾಕಲು ಹೇಳಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುವ ದಿನದಂದು ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್​ಡಿಪಿಐನಿಂದ ಅಡ್ಡಿ ವಿಚಾರವಾಗಿ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್​​ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.
ಘಟನಾಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ, ಸಂಘಟನೆ ನಿಷೇಧಿಸಬೇಕು ಎಂದು ಹೇಳಿದ್ದಾರೆ.

ರಥದಲ್ಲಿ ಸಾವರ್ಕರ್​ ಬದಲು ಟಿಪ್ಪು ಫೋಟೋ ಹಾಕಲು ಒತ್ತಡ; ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್​ಡಿಪಿಐ ಕಾರ್ಯಕರ್ತರು
ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದು, ಇಡೀ ದೇಶ ಕೊರೊನಾದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುತ್ತಿದೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಅಹಿತಕರ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಫೋಟೋ ವಿಚಾರಕ್ಕೆ ಜಟಾಪಟಿ ನಡೆದಿದ್ದು, ರಥದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಎಸ್​ಡಿಪಿಐ (SDPI) ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದಿದ್ದು ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್​ ಫೋಟೋ ಹಾಕಿದ್ದು ಎಸ್‌ಡಿಪಿಐ ಕಾರ್ಯಕರ್ತರನ್ನು ಕೆರಳಿಸಿದ್ದು, ಅದೇ ಕಾರಣಕ್ಕಾಗಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ರಥಕ್ಕೆ ತಡೆಯೊಡ್ಡಿ ಸಾವರ್ಕರ್ ಬದಲು ಟಿಪ್ಪು ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ. ಆದರೆ, ಫೋಟೋ ವಿಚಾರಕ್ಕೆ ಶುರುವಾದ ಜಗಳ ದೊಡ್ಡದಾಗುತ್ತಾ ಹೋಗಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲದೇ, ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು SDPI ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು