ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದ ಹುಡುಗಿಯರು ಉರ್ಫಿ ಜಾವೇದ್ ನೋಡಿ ಕಲಿಯಿರಿ : ಯೋ ಯೋ ಹನಿ ಸಿಂಗ್

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 4

ನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.

May be an image of 1 personಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. 

No photo description available.ಹನಿ ಸಿಂಗ್ ಇಂಥದ್ದೊಂದು ಮಾತು ಹೇಳುತ್ತಿದ್ದಂತೆಯೇ ಬಾಲಿವುಡ್ ನ ಅನೇಕರು ಗರಂ ಆಗಿದ್ದಾರೆ. ದೇಶದ ಹೆಣ್ಣು ಮಕ್ಕಳು ಯಾರನ್ನು ಮಾದರಿಯಾಗಿ ತಗೆದುಕೊಳ್ಳಬೇಕು ಎಂದು ಗೊತ್ತಿದೆ. ಹನಿ ಸಿಂಗ್ ಬೇಕಾದರೆ ಉರ್ಫಿಯನ್ನು ಮಾದರಿಯಾಗಿ ತಗೆದುಕೊಳ್ಳಲಿ ಎನ್ನುವ ಮಾತುಗಳನ್ನು ಆಡಿದ್ದಾರೆ. ಉರ್ಫಿ ಒಬ್ಬ ಮಾನಸಿಕ ಖಾಯಿಲೆ ಇರುವ ಹುಡುಗಿ. ಆಕೆ ಬದುಕು ಯಾವತ್ತಿಗೂ ಮಾದರಿ ಆಗುವಂಥದ್ದು ಅಲ್ಲ ಎಂದಿದ್ದಾರೆ.

No photo description available.

ಅಶ್ಲೀಲ ರೀತಿಯ ಬಟ್ಟೆಗಳನ್ನು ಉರ್ಫಿ ಹಾಕುತ್ತಾರೆ ಎನ್ನುವ ಕಾರಣಕ್ಕಾಗಿ ಮುಂಬೈ ಸೇರಿದಂತೆ ಹಲವು ಕಡೆ ದೂರುಗಳು ದಾಖಲಾಗಿವೆ. ಈ ಕುರಿತು ಉರ್ಫಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಎಷ್ಟೇ ದೂರುಗಳು ಬಂದರೂ, ನನ್ನನ್ನು ಬದಲಿಸಲು ಆಗುವುದಿಲ್ಲ. ನಾನು ಹೇಗಿರಬೇಕೋ ಹಾಗೆಯೇ ಇರುವೆ. ಅದು ನನ್ನ ಸ್ವಾತಂತ್ರ್ಯ. ಯಾವ ದೂರಿಗೂ ನಾನು ಹೆದರುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ