ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶ ವಿಭಜನೆ ಹೇಳಿಕೆ ಮುಳುವಾಯಿತಾ ಡಿಕೆ ಸುರೇಶ್ ಗೆ..? ಸೋಲಿನ ಬಳಿಕ ಡಿಕೆ ಸುರೇಶ್ ಪ್ರತಿಕ್ರಿಯೆ ಏನು..!

Twitter
Facebook
LinkedIn
WhatsApp
ದೇಶ ವಿಭಜನೆ ಹೇಳಿಕೆ ಮುಳುವಾಯಿತಾ ಡಿಕೆ ಸುರೇಶ್ ಗೆ..? ಸೋಲಿನ ಬಳಿಕ ಡಿಕೆ ಸುರೇಶ್ ಪ್ರತಿಕ್ರಿಯೆ ಏನು..!

ಬೆಂಗಳೂರು, ಜೂನ್ 4: ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ (Bengaluru rural) ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result) ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ (Dr CN Manjunath) ಗೆಲುವು ಖಚಿತವಾಗುತ್ತಿದ್ದಂತೆಯೇ ಸುರೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ‌ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.

ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಸೋಲಾಯಿತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜಕೀಯದಲ್ಲಿ ತಂತ್ರ ಕುತಂತ್ರ ಕೆಲಸ ಮಾಡುತ್ತದೆ. ಅದನ್ನೇ ಮಾಡಿದ್ದಾರೆ. ನಾನು ಕಾರ್ಯಕರ್ತರ ಜೊತೆ ಇದ್ದವನು. ಈಗಲೂ ಅವರ ಜತೆ ಇರುತ್ತೇನೆ. ನನ್ನ ಹೋರಾಟ ಮುಂದುವರಿಯಲಿದೆ. ಆದಾಗ್ಯೂ ದೇಶದಲ್ಲಿ ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ಸಂಖ್ಯೆ ಬಂದಿದೆ ಎಂದು ಅವರು ಹೇಳಿದರು.

400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿತ್ತು. ಮಾಧ್ಯಮಗಳ ಸಮೀಕ್ಷೆಗಳೂ ಹಾಗೆ ಹೇಳಿದ್ದವು. ಆದರೆ, ಅವುಗಳೆಲ್ಲ ಸುಳ್ಳಾಗಿವೆ ಎಂದು ಸುರೇಶ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು. ಈ ಬಾರಿ ಜಿದ್ದಾಜಿದ್ದಿನ ಕಣವಾಗಿ ಇಡೀ ರಾಜ್ಯದ ಗಮನ ಸೆಳೆದಿತ್ತು. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದಿರುವ ಡಾ. ಮಂಜುನಾಥ್ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈಗಾಗಲೇ ಎರಡು ಬಾರಿ ಸಂಸದರಾಗಿರುವ ಡಿಕೆ ಸುರೇಶ್ ಹ್ಯಾಟ್ರಿಕ್ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದರು. ಆದರೆ ಎಲ್ಲ ಲೆಕ್ಕಾಚಾರ ತಲೆಕೆಳಗಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ