ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

Twitter
Facebook
LinkedIn
WhatsApp
mcms 8

ಸ್ಯಾಂಡಲ್‌ವುಡ್ (Sandalwood) ನಟಿ ಕಮ್ ನಿರೂಪಕಿ ಅನುಶ್ರೀ (Anushree) ಮತ್ತೆ ಸುದ್ದಿಯಲ್ಲಿದ್ದಾರೆ. ರಿಯಾಲಿಟಿ ಶೋ ನಿರೂಪಣೆ ಶೂಟಿಂಗ್ ಕೊಂಚ ಬ್ರೇಕ್ ನೀಡಿ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತ ಫೋಟೋವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

May be an image of 1 person and standing

ತಮ್ಮದೇ ಭಿನ್ನ ಶೈಲಿಯ ನಿರೂಪಣೆ ಮೂಲಕ ಗಮನ ಸೆಳೆದಿರುವ ಅನುಶ್ರೀ ಕೊಂಚ ಬಿಡುವು ಮಾಡಿಕೊಂಡು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಮೂಲತಃ ಕರಾವಳಿ ಭಾಗದವರೇ ಆಗಿರುವ ಅನುಶ್ರೀ ದೈವದ ಆರಾಧನೆ ಮಾಡುತ್ತಾರೆ. ಇದೀಗ `777 ಚಾರ್ಲಿ’ (777 Charlie) ನಿರ್ದೇಶಕ ಕಿರಣ್ (Director Kiran) ಅವರ ಮನೆಯಲ್ಲಿ ದೈವ ಕೋಲ (Daiva Kola) ಮಾಡಲಾಗಿತ್ತು. ಈ ವೇಳೆ ಅನುಶ್ರೀ ಮತ್ತು ನಟಿ ಸಂಗೀತಾ (Sangeetha) ಕೂಡ ಭಾಗಿಯಾಗಿದ್ದಾರೆ.

ನಿರ್ದೇಶಕ ಕಿರಣ್ ಅವರ ಕಾಸರಗೋಡು ಮನೆಯಲ್ಲಿ ದೈಲ ಕೋಲ ನಡೆದಿದೆ. ಈ ವೇಳೆ ಅನುಶ್ರೀ ಕೂಡ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ಬಗ್ಗೆ ದೈವದ ಬಳಿ ಕೇಳಿದ್ದಾರೆ. ಕೊರಗಜ್ಜನಿಗೆ ಕೋಲ ಸೇವೆ ನೀಡಿದ್ದಾರೆ. 

May be an image of 1 person, standing and sky

ದೈವ ಕೋಲದ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಸುಂದರ ಹಾಗೂ ದೈವಿಕ ಕ್ಷಣಗಳು, ಕಾಸರಗೋಡು ಮಲ್ಲಮೂಲೆ ದೇವಸ್ಥಾನದಲ್ಲಿ ಎಂದು ನಟಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡ್ತಿದೆ. ಈ ಪೋಸ್ಟ್ ನೋಡುತ್ತಲೇ ಕೆಲ ನೆಟ್ಟಿಗರು ಮದುವೆಯ ಸಿಹಿ ಸುದ್ದಿ ಯಾವಾಗ ಎಂದು ಕಾಮೆಂಟ್ ಮಾಡ್ತಿದ್ದಾರೆ.

May be an image of 1 person, standing, sitting, tree and outdoors

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ